ಬಂಗಾರಪೇಟೆ: ತಾಲ್ಲೂಕಿನ ಕುಪ್ಪನಹಳ್ಳಿ ಗ್ರಾಮದ ರೇಷ್ಮೆ ಚಾಕಿ ಸಾಕಾಣಿಕೆ ಕೇಂದ್ರದ ಆವರಣದಲ್ಲಿ ಬಂಗಾರಪೇಟೆ ಹಾಗೂ ಕೆಜಿಎಫ್ ತಾಲ್ಲೂಕು ಮಟ್ಟದ ದ್ವಿತಳಿ ರೇಷ್ಮೆ ಬೆಳೆಗಾರರ ಅರಿವು ಕಾರ್ಯಕ್ರಮ ಬುಧವಾರ ನಡೆಯಿತು.

ಕೋಲಾರ ಜಿಲ್ಲಾ ಪಂಚಾಯತ್ ಹಾಗೂ ರೇಷ್ಮೆ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಜ್ಞರು ರೈತರಿಗೆ ಆಧುನಿಕ ತಂತ್ರಜ್ಞಾನದ ಕುರಿತು ಮಾರ್ಗದರ್ಶನ ನೀಡಿದರು.

ರೇಷ್ಮೆ ಉಪ ನಿರ್ದೇಶಕ ಎಸ್.ಎನ್.ಶ್ರೀನಿವಾಸ ಮಾತನಾಡಿ, ಜಾಗತಿಕ ಮಾರುಕಟ್ಟೆಯಲ್ಲಿ ದ್ವಿತಳಿ ರೇಷ್ಮೆಗೆ ಹೆಚ್ಚಿನ ಬೇಡಿಕೆಯಿದೆ. ರೈತರು ಹಳೆ ಪದ್ಧತಿಗಳ ಬದಲಾಗಿ ವೈಜ್ಞಾನಿಕವಾಗಿ ಚಾಕಿ ಸಾಕಾಣಿಕೆ ಮಾಡುವುದರಿಂದ ರೋಗ ಮುಕ್ತ ಗೂಡನ್ನು ಪಡೆಯಬಹುದು. ಇದು ಅಧಿಕ ಇಳುವರಿ ಮತ್ತು ಲಾಭಕ್ಕೆ ಸಹಕಾರಿ ಎಂದು ತಿಳಿಸಿದರು.

ಬಂಗಾರಪೇಟೆ ಮತ್ತು ಕೆಜಿಎಫ್ ವ್ಯಾಪ್ತಿಯ ರೈತರಿಗೆ ದ್ವಿತಳಿಯ ಪ್ರಾಮುಖ್ಯತೆಯನ್ನು ಸವಿಸ್ತಾರವಾಗಿ ವಿವರಿಸಲಾಯಿತು. ಹುಳು ಸಾಕಾಣಿಕೆ ಮನೆಯಲ್ಲಿನ ತಾಪಮಾನ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.

ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಹಾಯಧನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ರೈತರಿಗೆ ಕರೆ ನೀಡಲಾಯಿತು. ಜೊತೆಗೆ ರೇಷ್ಮೆ ಹುಳುಗಳಿಗೆ ತಗಲುವ ಹೈನು ರೋಗ ಮತ್ತು ಸುಣ್ಣಕಟ್ಟು ರೋಗಗಳ ನಿಯಂತ್ರಣಕ್ಕೆ ಪರಿಹಾರ ಸೂಚಿಸಿದರು.

ರೇಷ್ಮೆ ಇಲಾಖೆಯ ಉಪ ನಿರ್ದೇಶಕರು, ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಂತ್ರಿಕ ಸಹಾಯಕರು ಹಾಗೂ ಕುಪ್ಪನಹಳ್ಳಿ ಗ್ರಾಮದ ಸುತ್ತಮುತ್ತಲಿನ ನೂರಾರು ಪ್ರಗತಿಪರ ರೈತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-18-1139110388

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.