ಬಂಗಾರಪೇಟೆ: ಬೇಸಿಗೆ ಬಿಸಿಲು ಏರುತ್ತಿದ್ದಂತೆ ತಾಲ್ಲೂಕಿನ ಹಲವೆಡೆ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ, ವಿಶೇಷವಾಗಿ ಗೃಹಿಣಿಯರಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಸೂಚಿಸಿದರು.

ನಗರದ ತಾಲ್ಲೂಕು ಆಡಳಿತ ಕಚೇರಿಯಲ್ಲಿ ಶುಕ್ರವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೀರಿನ ವಿಷಯದಲ್ಲಿ ರಾಜಿಯಿಲ್ಲ. ಜನರು ನೀರಿಗಾಗಿ ಪರದಾಡುವಂತಾದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂದು ಗುಡುಗಿದರು.

ನಗರಸಭೆ ವ್ಯಾಪ್ತಿಯಲ್ಲಿ ಯರಗೋಳ್ ಯೋಜನೆ ನೀರು ಪೂರೈಕೆಯಾಗುತ್ತಿದ್ದರೂ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಗುತ್ತಿಗೆದಾರರು ಕೆಲವು ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿರುವುದು ಶಾಸಕರ ಆಕ್ರೋಶಕ್ಕೆ ಕಾರಣವಾಯಿತು. ಬಾಕಿ ಕೆಲಸ ಕೂಡಲೇ ಮುಗಿಸಿ ಸಮರ್ಪಕವಾಗಿ ನೀರು ಹರಿಸುವಂತೆ ಸೂಚಿಸಿದರು.

ಬೇಸಿಗೆ ಮುಗಿಯುವವರೆಗೆ ಯಾವುದೇ ಅಧಿಕಾರಿ ಅಥವಾ ಎಂಜಿನಿಯರ್ ಕೇಂದ್ರಸ್ಥಾನ ಬಿಟ್ಟು ಕದಲಬಾರದು. ಅಧಿಕಾರಿಗಳು 24 ಗಂಟೆಯೂ ಸಾರ್ವಜನಿಕರ ಕರೆಗಳಿಗೆ ಲಭ್ಯವಿರಬೇಕು. ಫೋನ್ ಸ್ವಿಚ್ ಆಫ್ ಮಾಡಿಕೊಳ್ಳುವ ಅಥವಾ ಜನರಿಗೆ ಸಿಗದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸೂಚಿಸಿದರು.

ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕೆಟ್ಟು ನಿಂತಿರುವ 25ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪಂಚಾಯಿತಿ ವಶಕ್ಕೆ ಪಡೆಯಲಾಗಿದೆ. ಇವುಗಳನ್ನು ಮುಂದಿನ ಒಂದು ವಾರದೊಳಗೆ ದುರಸ್ತಿಗೊಳಿಸಿ ಜನಬಳಕೆಗೆ ತೆರೆಯಲು ಕಾಲಮಿತಿ ನಿಗದಿಪಡಿಸಿದರು. ಅಂತರ್ಜಲ ಮಟ್ಟ ಕುಸಿದಿರುವ ಕಡೆಗಳಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸಲು ಕ್ರಮ ಕೈಗೊಳ್ಳುವಂತೆ ಮತ್ತು ಇದಕ್ಕೆ ವಿಶೇಷ ಅನುದಾನ ಕೊಡಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಈ ಬಾರಿ ಬಂಗಾರಪೇಟೆ ತಾಲ್ಲೂಕಿನ ಯಾವುದೇ ಹಳ್ಳಿಯಲ್ಲಿ ನೀರಿನ ಟ್ಯಾಂಕರ್ ಅವಲಂಬಿಸುವ ಪರಿಸ್ಥಿತಿ ಬರಬಾರದು ಎಂಬುದು ಸ್ಪಷ್ಟ ಗುರಿಯಾಗಿದೆ ಎಂದರು.

ಸಭೆಯಲ್ಲಿ ತಹಶೀಲ್ದಾರ್ ಕೆ.ಎನ್.ಸುಜಾತ, ತಾ.ಪಂ.ಇಒ ಎಚ್.ರವಿಕುಮಾರ್, ಎಇಇ ಆನಂದ್, ನಗರಸಭೆ ಆಯುಕ್ತ ಸತ್ಯನಾರಾಯಣ, ಕೃಷಿ ಇಲಾಖೆ ಅಧಿಕಾರಿ ಪ್ರತಿಭಾ, ತೋಟಗಾರಿಕೆ ಅಧಿಕಾರಿ ಶಿವಕುಮಾರಿ, ಬೆಸ್ಕಾಂ ಎಇಇ ಸುಕುಮಾರ್ ರಾಜು ಮತ್ತು ವಿವಿಧ ಪಂಚಾಯಿತಿಗಳ ಆಡಳಿತಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-18-677738899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.