ಬಂಗಾರಪೇಟೆ: ತಾಲ್ಲೂಕಿನ ದೊಡ್ಡವಲಮಾದಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಕುಡಿವ ನೀರಿನ ಅದಾಲತ್ ನಡೆಯಿತು.

ಈ ವೇಳೆ ಕಾರ್ಯನಿರ್ವಾಹಣಾಧಿಕಾರಿ ಎಚ್.ರವಿ ಕುಮಾರ್ ಮಾತನಾಡಿ, ಬೇಸಿಗೆಯಲ್ಲಿ ಸಂಭವಿಸುವ ನೀರಿನ ಅಭಾವ ಎದುರಿಸಲು ಪಂಚಾಯಿತಿ ಮಟ್ಟದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಪ್ರತಿ ಮನೆಗೂ ಸಮರ್ಪಕವಾಗಿ ನೀರು ತಲುಪಿಸುವ ನಿಟ್ಟಿನಲ್ಲಿ ಸೂಚನೆ ನೀಡಿದರು.

ನೀರಿನ ಮೂಲಗಳಾದ ಟ್ಯಾಂಕ್, ಕೊಳವೆಬಾವಿಗಳ ಸುತ್ತ ಸ್ವಚ್ಛತೆ ಕಾಪಾಡುವುದು ಹಾಗೂ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾದಲ್ಲಿ ಅಥವಾ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಸಂಪರ್ಕಿಸಲು ಕುಡಿಯುವ ನೀರಿನ ಸಹಾಯವಾಣಿಯ ಬಗ್ಗೆ ಮಾಹಿತಿ ನೀಡಿದರು.

ಕುಡಿಯಲು ಮತ್ತು ಅಡುಗೆಗೆ ಮಾತ್ರ ಶುದ್ಧ ನೀರನ್ನು ಬಳಸಿ. ಅನಗತ್ಯವಾಗಿ ನಲ್ಲಿಗಳನ್ನು ತೆರೆದಿಡಬೇಡಿ, ಕುಡಿಯುವ ನೀರಿನಿಂದ ರಸ್ತೆಗಳಿಗೆ ನೀರು ಹಾಕುವುದು, ವಾಹನ ತೊಳೆಯುವುದು ಮತ್ತು ತೋಟಗಳಿಗೆ ಹರಿಸುವುದನ್ನು ಕಡ್ಡಾಯವಾಗಿ ನಿಲ್ಲಿಸಿ. ನಲ್ಲಿಗಳಲ್ಲಿ ಅಥವಾ ಪೈಪ್ಲೈನ್ಗಳಲ್ಲಿ ಸೋರಿಕೆ ಕಂಡುಬಂದಲ್ಲಿ ತಕ್ಷಣ ಗ್ರಾಮ ಪಂಚಾಯಿತಿಗೆ ದೂರು ನೀಡಿ ದುರಸ್ತಿ ಮಾಡಿಸಿ. ಪಾತ್ರೆ ತೊಳೆದ ಅಥವಾ ತರಕಾರಿ ತೊಳೆದ ನೀರನ್ನು ಗಿಡಗಳಿಗೆ ಬಳಸುವ ಮೂಲಕ ನೀರನ್ನು ಉಳಿತಾಯ ಮಾಡಿ ಎಂದು ತಿಳಿಸಿದರು.

ನಿಮ್ಮ ವಾರ್ಡ್ನಲ್ಲಿ ನೀರಿನ ಸಮಸ್ಯೆ ಎದುರಾದರೆ ಪಂಚಾಯಿತಿಯ ಕುಡಿಯುವ ನೀರಿನ ಸಹಾಯವಾಣಿಗೆ ತಕ್ಷಣ ಕರೆ ಮಾಡಿ. ಬೇಸಿಗೆಯಲ್ಲಿ ಕಲುಷಿತ ನೀರಿನಿಂದ ಕಾಲರಾ, ಅತಿಸಾರ ಭೇದಿಯಂತಹ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಸಲಹೆ ನೀಡಿದರು.

ಎಇಇ ಆನಂದ್ ಕುಮಾರ್, ಅಕ್ಷರ ದಾಸೋಹ ಯೋಜನೆಯ ನಿರ್ದೇಶಕ ಯುವರಾಜ್, ಪಿಡಿಒ ಸರಸ್ವತಿ, ಗ್ರಾಮ ಆಡಳಿತಾಧಿಕಾರಿ ಶ್ವೇತಾ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮುನಿರಾಜು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-18-263218317

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.