ಬಂಗಾರಪೇಟೆ: ಇಲ್ಲಿನ ವಿವೇಕಾನಂದ ನಗರದ ಮನೆಯೊಂದರಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರಪೇಟೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ₹37 ಲಕ್ಷ ಮೌಲ್ಯದ ಬೆಳ್ಳಿ, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಮಾಲೂರು ತಾಲ್ಲೂಕಿನ ಎಳೇಸಂದ್ರ ಗ್ರಾಮದ ಕನಕರಾಜ್.ಡಿ (23), ಕೆಜಿಎಫ್ ನಗರದ ಆಂಡರ್ಸನ್ ಪೇಟೆಯ ಕ್ಸೇವಿಯರ್ ಅಲಿಯಾಸ್ ಅಪ್ಪಕುಟ್ಟಿ (22), ಮತ್ತು ರಾಬರ್ಟ್ಸನ್ ಪೇಟೆಯ ಲೋಕೇಶ್ ಅಲಿಯಾಸ್ ಬುಜ್ಜು (21) ಬಂಧಿತ ಆರೋಪಿಗಳು. ಅವರನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿವೇಕಾನಂದ ನಗರದ 1ನೇ ಕ್ರಾಸ್ ನಿವಾಸಿ ಗೋವಿಂದಪ್ಪ ಎಂಬುವವರು ಫೆ. 12 ರಿಂದ 17ರವರೆಗೆ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಕಳ್ಳರು ಕನ್ನ ಹಾಕಿದ್ದರು. ಗೋವಿಂದಪ್ಪ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ಡಿವೈಎಸ್ಪಿ ವಿ.ಲಕ್ಷ್ಮಯ್ಯ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಣುಗೋಪಾಲ್, ವಿಜಯ್ಕುಮಾರ್, ಅನಿಲ್ ಕುಮಾರ್, ಮಂಜುನಾಥ್, ಶ್ರೀನಿವಾಸ ಮತ್ತು ಮುನೇಂದ್ರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-18-1927487664

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.