ಬಂಗಾರಪೇಟೆ: ತಾಲ್ಲೂಕಿನ ತೊಪ್ಪನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ದಶಕಗಳಿಂದ ಇದ್ದ ಸಾರ್ವಜನಿಕ ದಾರಿಯನ್ನು ಅತಿಕ್ರಮಿಸಿ ನಿವೇಶನ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಶಾಲಾ ಆವರಣಕ್ಕೆ ಸಂಪರ್ಕ ಕಲ್ಪಿಸುವ ಹಾದಿಯನ್ನು ಅಕ್ರಮವಾಗಿ ಮುಚ್ಚಿ, ನಿವೇಶನಗಳನ್ನಾಗಿ ಪರಿವರ್ತಿಸಿರುವ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಕಲಾ ಕೆ.ಎಂ. ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಣಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಶಾಲಾ ಹಾದಿಯನ್ನು ಅತಿಕ್ರಮಿಸಿರುವುದು ದೃಢಪಟ್ಟಿದ್ದು, ಈ ಸಂಬಂಧ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಕಲಾ ಕೆ.ಎಂ. ತಿಳಿಸಿದ್ದಾರೆ. ಶಾಲಾ ಮಕ್ಕಳ ಹಿತದೃಷ್ಟಿಯಿಂದ ಮತ್ತು ಸರ್ಕಾರಿ ಸ್ವತ್ತಿನ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಯಾರೇ ಪ್ರಭಾವಿಗಳಿದ್ದರೂ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅತಿಕ್ರಮಣದಾರರ ವಿರುದ್ಧ ದೂರು ದಾಖಲಿಸಿರುವುದು ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಸಮಾಧಾನ ತಂದಿದೆ. ಕೂಡಲೇ ಅತಿಕ್ರಮಣಗೊಂಡಿರುವ ಜಾಗವನ್ನು ತೆರವುಗೊಳಿಸಿ ಶಾಲಾ ಮಕ್ಕಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ವೇಳೆ ಶಾಲಾ ಮುಖ್ಯ ಶಿಕ್ಷಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-18-955251712

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.