ಬಂಗಾರಪೇಟೆ: ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಪೊಲೀಸ್ ಇಲಾಖೆಯ ಜೊತೆಗೆ ಸಹಕರಿಸಬೇಕೆಂದು ಕಾಮಸಮುದ್ರ ವೃತ್ತ ನಿರೀಕ್ಷಕ ಮಾರ್ಕೊಂಡಯ್ಯ ಎಸ್.ಟಿ. ತಿಳಿಸಿದರು.

ತಾಲ್ಲೂಕಿನ ಬೂದಿಕೋಟೆ ಗ್ರಾಮದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ನಾಲ್ಕು ಚಕ್ರದ ವಾಹನ ಚಾಲಕರು ಸೀಟ್ ಬೆಲ್ಟ್ ಧರಿಸಬೇಕು. ಇದು ಕೇವಲ ದಂಡದಿಂದ ಪಾರಾಗಲು ಮಾತ್ರವಲ್ಲ, ಪ್ರಾಣ ರಕ್ಷಣೆಗೂ ಅತ್ಯಗತ್ಯ ಎಂದರು.

18 ವರ್ಷದೊಳಗಿನ ಮಕ್ಕಳಿಗೆ ಪೋಷಕರು ಬೈಕ್ ನೀಡಬಾರದು. ಒಂದು ವೇಳೆ ಅಪ್ರಾಪ್ತರು ವಾಹನ ಚಲಾಯಿಸುವುದು ಕಂಡುಬಂದಲ್ಲಿ ಅಂತಹ ಮಕ್ಕಳ ಪೋಷಕರ ವಿರುದ್ಧವೇ ದೂರು ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡುವುದು ಶಿಕ್ಷಾರ್ಹ ಅಪರಾಧ. ಇಂತಹ ಕೃತ್ಯಗಳಿಗೆ ಅಸ್ಪದ ನೀಡುವ ಪೋಷಕರು ಮತ್ತು ಮದುವೆಯ ಮುಂದಾಳತ್ವ ವಹಿಸುವವರ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಿಎಸ್ಐ ಗುರುರಾಜ ಚಿಂತಾಕಲ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಯುವಕರು ಗಾಂಜಾ, ತಂಬಾಕು ಮತ್ತು ಮದ್ಯಪಾನದಂತಹ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಇವುಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಬೇಕು. ಶಾಲಾ-ಕಾಲೇಜುಗಳ ಆರಂಭ ಮತ್ತು ಮುಕ್ತಾಯದ ಸಮಯದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಪೊಲೀಸ್ ಗಸ್ತು ನಿಯೋಜಿಸಲಾಗುವುದು ಎಂದರು.

ನಾಗರಾಜಪ್ಪ.ಎಸ್, ಶಿವಣ್ಣ ಕೆ.ಎನ್, ಮುನಿಕೃಷ್ಣಪ್ಪ, ದಿಂಗಾಲೇಶ್ವರ ನೀಲಣ್ಣ, ಮಹದೇವಪ್ಪ, ಮಾರ್ಕಂಡೇಗೌಡ, ಚಂದ್ರಶೇಖರ್, ರಮೇಶ್, ಬಿ.ಆರ್ ಮಂಜುನಾಥ್ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-18-976900825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.