ಬಂಗಾರಪೇಟೆ: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಮುಸ್ಲಿಂರು ಗುರುವಾರ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಹಬ್ಬದ ಅಂಗವಾಗಿ ಬೆಳಗ್ಗೆಯಿಂದಲೇ ಹೊಸ ಬಟ್ಟೆ ಧರಿಸಿದ ಮುಸ್ಲಿಂರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಈದ್ಗಾ ಮೈದಾನದಲ್ಲಿ ಜಮಾಯಿಸಿದರು. ಸಾವಿರಾರು ಮಂದಿ ಒಂದೆಡೆ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಮುಸ್ಲಿಂರು ಮನೆಗಳಲ್ಲಿ ಸಿದ್ಧಪಡಿಸಿದ್ದ ವಿಶೇಷ ಖಾದ್ಯಗಳನ್ನು ನೆರೆಹೊರೆಯವರಿಗೆ ಹಂಚಿ ಸಂಭ್ರಮಿಸಿದರು. ಹಬ್ಬದ ಅಂಗವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದ ಪ್ರಮುಖ ವೃತ್ತಗಳು ಹಾಗೂ ಈದ್ಗಾ ಮೈದಾನದ ಸುತ್ತಮುತ್ತ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪ್ರಾರ್ಥನಾ ಸ್ಥಳಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರಮುಖರು ಭೇಟಿ ನೀಡಿ ಮುಸ್ಲಿಂರಿಗೆ ಶುಭಾಶಯ ಕೋರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-18-220076155

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.