ಬಂಗಾರಪೇಟೆ: ತಾಲ್ಲೂಕಿನ ಕಾರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿಕೊಂಡಿರುವ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ್ದ ತಹಶೀಲ್ದಾರ್ ಕೆ.ಎನ್.ಸುಜಾತ ಅವರಿಗೆ ಒತ್ತುವರಿದಾರರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಟ್ಟಡ ತೆರವುಗೊಳಿಸುವಂತೆ ನೋಟಿಸ್ ನೀಡಿದ್ದರು. ಸ್ಥಳ ಪರಿಶೀಲನೆಗೆ ತೆರಳಿದ್ದ ಸಮಯದಲ್ಲಿ ಒತ್ತುವರಿದಾರರು ಮುತ್ತಿಗೆ ಹಾಕಿದರು. ಸರ್ವೆ ಇಲಾಖೆಯು ತಾರತಮ್ಯ ಎಸಗಿದ್ದು, ಪಕ್ಷಪಾತವಾಗಿ ಸರ್ವೆ ಮಾಡಲಾಗಿದೆ. ತಕ್ಷಣವೇ ಮರು ಸರ್ವೆ ಮಾಡಿಸಬೇಕು ಎಂದು ಪಟ್ಟು ಹಿಡಿದರು.

ಸರ್ವೆ ಇಲಾಖೆಯವರು ಒಂದು ಕಡೆ ಸರ್ವೆ ಮಾಡಿ, ಮತ್ತೊಂದು ಕಡೆ ಕೈಬಿಟ್ಟು ತಾರತಮ್ಯ ಮಾಡಿದ್ದಾರೆ. ಸರ್ವೆ ಮಾಡುವಾಗ ನಮಗೆ ಯಾವುದೇ ಮಾಹಿತಿ ನೀಡಿಲ್ಲ, ನಮ್ಮ ದಾಖಲೆಗಳನ್ನೂ ಪಡೆದಿಲ್ಲ. ಈಗ ಏಕಾಏಕಿ ಬಂದು ತೆರವುಗೊಳಿಸಿ ಎಂದರೆ ಎಲ್ಲಿಗೆ ಹೋಗಬೇಕು? ಮತ್ತೊಮ್ಮೆ ಸರ್ವೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ದೂರುದಾರ ಪ್ರೇಮ್ ಕುಮಾರ್ ವಿರುದ್ಧ ತಿರುಗಿಬಿದ್ದರು. ಇದರಿಂದಾಗಿ ಎರಡು ಗುಂಪಿನ ನಡುವೆ ಮಾತಿನ ಚಕಮಕಿ, ವಾಗ್ವಾದ ನಡೆಯಿತು. ಕೆಲ ಸಮಯ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಗದ್ದಲ ಹೆಚ್ಚಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ತಹಶೀಲ್ದಾರ್ ಕೆ.ಎನ್.ಸುಜಾತ, ‘ಸದ್ಯ ಸ್ಥಳದಲ್ಲಿ ಸರ್ವೆ ಅಧಿಕಾರಿಗಳು ಇಲ್ಲ. ಅವರನ್ನು ಕರೆಯಿಸಿ ನಿಮ್ಮ ಬಳಿ ಇರುವ ಕಂದಾಯ ದಾಖಲೆಗಳನ್ನು ಪರಿಶೀಲಿಸಲಾಗುವುದು. ಒಂದು ವೇಳೆ ಲೋಪದೋಷ ಆಗಿರುವುದು ಕಂಡು ಬಂದರೆ, ಅಗತ್ಯವಿದ್ದಲ್ಲಿ ಮರು ಸರ್ವೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಏನಿದು ಘಟನೆ: ಕಾರಹಳ್ಳಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಸರ್ವೆ ನಂಬರ್ಗಳಿಗೆ ಸೇರಿದ ರಾಜಕಾಲುವೆಯನ್ನು ಕೆಲ ರಿಯಲ್ ಎಸ್ಟೇಟ್ನವರು ಒತ್ತುವರಿ ಮಾಡಿಕೊಂಡು ಲೇಔಟ್ ನಿರ್ಮಿಸಿ ಬಡವರಿಗೆ ನಿವೇಶನ ಹಾಗೂ ಮನೆ ಮಾರಾಟ ಮಾಡಿದ್ದರು. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿರುವುದರಿಂದ ಮಳೆ ನೀರು ಸರಾಗವಾಗಿ ಕೆರೆಗೆ ಹರಿಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕಟ್ಟಡ ತೆರವುಗೊಳಿಸುವಂತೆ ಕೋರಿ ಪ್ರೇಮ್ ಕುಮಾರ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಲೋಕಾಯುಕ್ತರ ಆದೇಶದಂತೆ ಸರ್ವೆ ಇಲಾಖೆಯು ಜಂಟಿ ಸರ್ವೆ ನಡೆಸಿ, 24 ಮಂದಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವುದನ್ನು ಪತ್ತೆ ಹಚ್ಚಿತ್ತು. ಎಲ್ಲೆಲ್ಲಿ ಒತ್ತುವರಿಯಾಗಿದೆ ಎಂಬುದನ್ನು ಗುರುತಿಸಿ ತಹಶೀಲ್ದಾರ್ಗೆ ವರದಿ ಸಲ್ಲಿಸಿತ್ತು. ಇದರ ಆಧಾರದ ಮೇಲೆ ತಾಲ್ಲೂಕು ಆಡಳಿತವು ಒತ್ತುವರಿದಾರರಿಗೆ ಎರಡು ಬಾರಿ ನೋಟಿಸ್ ನೀಡಿ ತೆರವುಗೊಳಿಸಲು ಸೂಚಿಸಿತ್ತು. ನೋಟಿಸ್ ನೀಡಿದರೂ ಒತ್ತುವರಿ ತೆರವುಗೊಳಿಸದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸುಜಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಗರಸಭೆ ಆಯುಕ್ತ ಸತ್ಯನಾರಾಯಣ, ಕಂದಾಯ ನಿರೀಕ್ಷಕ ಅಜೇಯ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-18-1860169941

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.