ಬಂಗಾರಪೇಟೆ: ತಾಲ್ಲೂಕಿನ ಬೋಗ್ಗಲಹಳ್ಳಿ ಮಜರಾ ಚಿನ್ನಕಾಮನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಒಡೆದು ಹಲವು ದಿನ ಕಳೆದರೂ, ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ದುರಸ್ತಿಗೊಳಿಸಿಲ್ಲ. ಇದರಿಂದಾಗಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಗ್ರಾಮಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ ಒಡೆದು ಹೋಗಿರುವ ಪರಿಣಾಮ ಕಳೆದ ಕೆಲವು ದಿನಗಳಿಂದ ಗ್ರಾಮಕ್ಕೆ ಒಂದು ಹನಿಯೂ ನೀರು ಹರಿಯುತ್ತಿಲ್ಲ. ಇದರಿಂದಾಗಿ ದೈನಂದಿನ ಬದುಕು ಮತ್ತು ಜಾನುವಾರುಗಳಿಗೆ ನೀರಿಲ್ಲ. ಹನಿ ನೀರಿಗೂ ಅಲೆಯುವ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ದೂರಿದರು.

ಇದರಿಂದಾಗಿ ಗ್ರಾಮಸ್ಥರು ಕುಡಿಯುವ ಮತ್ತು ಬಳಕೆ ನೀರಿಗಾಗಿ ಕಿ.ಮೀ.ಗಟ್ಟಲೇ ದೂರವಿರುವ ತೋಟದಲ್ಲಿರುವ ಬೋರ್ವಲ್ಗಳ ಮೇಲೆ ಅವಲಂಬನೆಯಾಗಿದ್ದಾರೆ. ಪ್ರತಿನಿತ್ಯವೂ ದೂರದ ತೋಟಗಳಿಂದ ಕೊಡಗಳಲ್ಲಿ ನೀರು ತರುವ ಅನಿವಾರ್ಯತೆ ಎದುರಾಗಿದೆ. ಹಲವು ದಿನಗಳಿಂದ ನೀರಿಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದರೂ, ಪಂಚಾಯಿತಿ ಅಧಿಕಾರಿಗಳು ಮಾತ್ರ ಇತ್ತ ತಲೆಯೂ ಹಾಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಒದಗಿಸುವಲ್ಲಿ ಸ್ಥಳೀಯ ಆಡಳಿತವು ಸಂಪೂರ್ಣ ವಿಫಲವಾಗಿದೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಡಳಿತ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಬೋಗ್ಗಲಹಳ್ಳಿ ಮಜರಾ ಚಿನ್ನಕಾಮನಹಳ್ಳಿ ಗ್ರಾಮದಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಪೈಪ್ ಒಡೆದು ಹೋಗಿರುವ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ಕನಿಷ್ಠ ಟ್ಯಾಂಕರ್ ಮೂಲಕವಾದರೂ ನೀರು ಸರಬರಾಜು ಮಾಡಬೇಕಿತ್ತು. ಆದರೆ, ಮಾಡಿಲ್ಲ. ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ತಕ್ಷಣವೇ ಪೈಪ್ಲೈನ್ ದುರಸ್ತಿ ಮಾಡಿ ನೀರು ಸರಬರಾಜು ಮಾಡಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮದ ನಿವಾಸಿ ರಘು ಎಚ್ಚರಿಕೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-18-1459942067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.