ಬಂಗಾರಪೇಟೆ: ಸಾವಿರಾರು ಪ್ರಯಾಣಿಕರು ಮತ್ತು ಸ್ಥಳೀಯರು ನಿತ್ಯವೂ ಸಂಚರಿಸುವ ಮುಖ್ಯ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜೊತೆಗೆ ಅಲ್ಲಲ್ಲಿ ಬಾಯಿ ತೆರೆದಿದ್ದು, ಸಾರ್ವಜನಿಕರ ಜೀವಕ್ಕೆ ಕಂಟಕವಾಗಿವೆ.

ಅಷ್ಟೇ ಅಲ್ಲದೆ ಕೊಳಚೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತಿದ್ದು, ಗಬ್ಬು ನಾರುತ್ತಿದೆ. ಇದರಿಂದ ದಾರಿಹೋಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬಸ್ ಮತ್ತು ರೈಲ್ವೆ ನಿಲ್ದಾಣಗಳಿಗೆ ನಿತ್ಯವೂ ಸಾವಿರಾರು ಮಂದಿ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆ ಬದಿಯಲ್ಲೇ ಸಾಗುತ್ತಾರೆ. ಬಾಯಿ ತೆರೆದಿರುವ ಚರಂಡಿಯಲ್ಲಿ ನಿಂತಿರುವ ಕೊಳಚೆ ನೀರಿನಿಂದಾಗಿ ಸೊಳ್ಳೆಗಳ ಕಾಟ ವಿಪರೀತವಾಗಿದ್ದು ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಜೊತೆಗೆ ವ್ಯಾಪಾರಸ್ಥರು ಈ ದುರ್ವಾಸನೆಯ ನಡುವೆಯೇ ವ್ಯಾಪಾರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಜನನಿಬಿಡ ರಸ್ತೆಗಳಲ್ಲೇ ಚರಂಡಿ ಬಾಯ್ತೆರೆದಿದ್ದು, ರಾತ್ರಿ ವೇಳೆ ಪಾದಚಾರಿಗಳು ಹಾಗೂ ಬೈಕ್ ಸವಾರರು ಬಿದ್ದು ಗಾಯಗೊಳ್ಳುವ ಆತಂಕ ಎದುರಾಗಿದೆ. ಕಸದ ವಿಲೇವಾರಿ ಸಮರ್ಪಕವಾಗಿ ಆಗದೆ ಚರಂಡಿಯಲ್ಲಿ ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ತುಂಬಿ ನೀರು ಸರಾಗವಾಗಿ ಹರಿಯುತ್ತಿಲ್ಲ. ಈ ಬಗ್ಗೆ ಸ್ಥಳೀಯರು ಹಲವು ಬಾರಿ ನಗರಸಭೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನಗರಸಭೆ ಅಧಿಕಾರಿಗಳು ಕೇವಲ ಭರವಸೆ ನೀಡುವುದನ್ನು ಬಿಟ್ಟು, ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು. ಹದಗೆಟ್ಟಿರುವ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ, ಸಾರ್ವಜನಿಕರ ಆರೋಗ್ಯ ಕಾಪಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-1482202907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.