ಬಂಗಾರಪೇಟೆ: ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಶುಕ್ರವಾರ ಭೇಟಿ ನೀಡಿ ಆಸ್ಪತ್ರೆ ಆವರಣದ ಸ್ವಚ್ಛತೆ ಹಾಗೂ ರೋಗಿಗಳಿಗೆ ನೀಡಲಾಗುತ್ತಿರುವ ಸೌಲಭ್ಯ ಕೂಲಂಕಷವಾಗಿ ಪರಿಶೀಲಿಸಿದರು.

ಆಸ್ಪತ್ರೆ ವಿವಿಧ ವಾರ್ಡ್, ಶೌಚಾಲಯ ಹಾಗೂ ಹೊರರೋಗಿಗಳ ವಿಭಾಗಕ್ಕೆ ಭೇಟಿ ನೀಡಿದ ಶಾಸಕರು, ಸ್ವಚ್ಛತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆಸ್ಪತ್ರೆ ಎಂದರೆ ರೋಗಿಗಳಿಗೆ ಗುಣಮುಖವಾಗುವ ನಂಬಿಕೆ ಇರಬೇಕು. ಅಲ್ಲಿನ ಪರಿಸರ ಹದಗೆಟ್ಟರೆ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆಸ್ಪತ್ರೆ ಕಾರ್ಯವೈಖರಿ ವೀಕ್ಷಿಸಿದ ನಂತರ ಶಾಸಕರು ಸ್ವತಃ ಕಣ್ಣಿನ ವಿಭಾಗಕ್ಕೆ ತೆರಳಿ ವೈದ್ಯರನ್ನು ಭೇಟಿ ಮಾಡಿದರು. ಅಲ್ಲಿನ ನೇತ್ರ ತಜ್ಞರಿಂದ ತಮ್ಮ ಕಣ್ಣುಗಳ ತಪಾಸಣೆ ಮಾಡಿಸಿಕೊಂಡರು.

ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ಸರಿಯಾದ ಸಮಯಕ್ಕೆ ಔಷಧ ಮತ್ತು ಊಟ ಸಿಗುತ್ತಿದೆಯೇ ಎಂದು ಮಾಹಿತಿ ಪಡೆದರು.

ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ, ಸ್ಥಳೀಯ ಮುಖಂಡರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-18-1581382476

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.