ಬಂಗಾರಪೇಟೆ: ತಾಲ್ಲೂಕಿನ ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೀಲುಕುಪ್ಪ ಗ್ರಾಮದಲ್ಲಿ ಗುರುವಾರ ಪೊಲೀಸ್ ಬೀಟ್ ಸಭೆ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರು ಪಾಲ್ಗೊಂಡು ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದರು.

ಈ ವೇಳೆ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮಾತನಾಡಿ, ಕುಟುಂಬ ಸಮೇತ ಮನೆಯ ಬೀಗ ಹಾಕಿ ಪ್ರವಾಸ ಅಥವಾ ದೂರದ ಊರುಗಳಿಗೆ ತೆರಳುವ ಮುನ್ನ ಕಡ್ಡಾಯವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಇಲಾಖೆಯ ಮೊಬೈಲ್ ಆ್ಯಪ್ ಅಥವಾ ನೇರವಾಗಿ ಮಾಹಿತಿ ನೀಡುವ ಮೂಲಕ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಸೌಲಭ್ಯ ಬಳಸಿಕೊಂಡರೆ, ಅಂತಹ ಮನೆಗಳ ಮೇಲೆ ಪೊಲೀಸರು ನಿರಂತರ ನಿಗಾ ವಹಿಸುತ್ತಾರೆ. ಇದರಿಂದ ಕಳ್ಳತನದ ಭೀತಿಯನ್ನು ತಪ್ಪಿಸಬಹುದು ಎಂದರು.

ಅಪರಿಚಿತ ಲಿಂಕ್ಗಳನ್ನು ಕ್ಲಿಕ್ ಮಾಡುವುದು, ಒಟಿಪಿ ಹಂಚಿ ಕೊಳ್ಳುವುದು ಅಥವಾ ಆಕರ್ಷಕ ಬಹುಮಾನದ ಆಮಿಷಗಳಿಗೆ ಒಳಗಾಗಬಾರದು. ಯಾವುದೇ ಹಣಕಾಸಿನ ವಂಚನೆ ನಡೆದ ತಕ್ಷಣ ವಿಳಂಬ ಮಾಡದೆ 1930 ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಬೇಕು. ಯಾವುದೇ ತುರ್ತು ಸಂದರ್ಭಗಳಲ್ಲಿ, ಅಪಘಾತ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಾಗ ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ. ಇದರಿಂದ ಅತೀ ವೇಗವಾಗಿ ಪೊಲೀಸ್ ನೆರವು ಸ್ಥಳಕ್ಕೆ ತಲುಪಲಿದೆ ಎಂದರು.

ಡಿವೈಎಸ್ಪಿ ಲಕ್ಷ್ಮಯ್ಯ ಮಾತನಾಡಿ, ರಸ್ತೆ ಸುರಕ್ಷತೆಯು ಪ್ರತಿಯೊಬ್ಬರ ಜವಾಬ್ದಾರಿ. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಚಾಲನಾ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಎಂದರು.

ಇನ್ಸ್ಪೆಕ್ಟರ್ ರವಿ ಕುಮಾರ್ ಸಿ, ಪಿಎಸ್ಐ ಕಿರಣ್ ಕುಮಾರ್, ಗುರುರಾಜ ಚಿಂತಕಾಲ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-18-2005697743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.