ಬಂಗಾರಪೇಟೆ: ಕ್ಷೇತ್ರದ ಜನತೆಗೆ ಧಮ್ಕಿ ಹಾಕುವುದು, ಬೆದರಿಸುವುದು ಮತ್ತು ದೌರ್ಜನ್ಯ ಮಾಡುವುದನ್ನೇ ರಾಜಕಾರಣ ಎಂದು ನಂಬಿರುವವರಿಗೆ ಶ್ರೀರಾಮಚಂದ್ರ ಒಳ್ಳೆಯ ಬುದ್ಧಿ ನೀಡಲಿ. ಇಂತಹ ಕೀಳುಮಟ್ಟದ ರಾಜಕೀಯ ಬಿಟ್ಟು ಕ್ಷೇತ್ರದ ಹಿತದೃಷ್ಟಿಯಿಂದ ಅಭಿವೃದ್ಧಿ ಕಾರ್ಯ ಮಾಡುವಂತ ಒಳ್ಳೆಯ ಬುದ್ಧಿ ನೀಡಲಿ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ವಿರೋಧಿಗಳಿಗೆ ತಿರುಗೇಟು ನೀಡಿದರು.

ನಗರದ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಟೀಕೆ-ಟಿಪ್ಪಣಿ ಸಹಜ. ಆದರೆ, ಅದು ವೈಯಕ್ತಿಕ ದ್ವೇಷ ಅಥವಾ ಬೆದರಿಕೆ ಮಟ್ಟಕ್ಕೆ ಇಳಿಯಬಾರದು. ಕ್ಷೇತ್ರದ ಜನತೆ ಶಾಂತಿ ಮತ್ತು ಅಭಿವೃದ್ಧಿಯನ್ನು ಬಯಸುತ್ತಾರೆ. ಜನತೆಯ ಮೂಲ ಸೌಕರ್ಯಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು, ಕೇವಲ ಧಮ್ಕಿ ಹಾಕುವ ಮೂಲಕ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಖಂಡನೀಯ ಎಂದರು.

ಸಾರ್ವಜನಿಕರು ಎಲ್ಪಿಜಿ ಸಿಲಿಂಡರ್ ಹಾಗೂ ಪೆಟ್ರೋಲ್ಗಾಗಿ ಗಾಬರಿಗೊಂಡು ಮುಗಿಬೀಳುವ ಅಗತ್ಯವಿಲ್ಲ. ಸರ್ಕಾರವು ಮುಂಜಾಗ್ರತಾ ಕ್ರಮವಾಗಿ ದೇಶಕ್ಕೆ ಅಗತ್ಯವಿರುವಷ್ಟು ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಗ್ಯಾಸ್ ಅನ್ನು ಸಂಗ್ರಹಿಸಿಟ್ಟಿದೆ. ಯಾವುದೇ ಕಾರಣಕ್ಕೂ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ. ಸಾರ್ವಜನಿಕರು ಕೀಡಿಗೇಡಿಗಳು ಹಬ್ಬಿಸುವ ವದಂತಿಗಳಿಗೆ ಕಿವಿಗೊಡಬಾರದು ಎಂದರು.

ತಮಿಳುನಾಡಿನಲ್ಲಿ ಪ್ರಸ್ತುತ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ತೀವ್ರವಾದ ಆಡಳಿತ ವಿರೋಧಿ ಅಲೆ ಇದೆ. ಜನರು ಬದಲಾವಣೆ ಬಯಸುತ್ತಿದ್ದು, ಈ ಬಾರಿ ತಮಿಳುನಾಡಿನಲ್ಲಿ ಎನ್ಡಿಎ ಮೈತ್ರಿಕೂಟವು ಅಭೂತ ಪೂರ್ವ ಜಯ ದಾಖಲಿಸಲಿದ್ದಾರೆ ಎಂದು ಹೇಳಿದರು.

ಪುರಸಭೆ ಸದಸ್ಯ ಕಪಾಲಿ ಶಂಕರ್, ಯಲ್ಲಪ್ಪ, ಪ್ರದೀಪ್, ಬೊಪ್ಪನಹಳ್ಳಿ ನಾರಾಯಣಪ್ಪ, ಶಂಕರ್ ರೆಡ್ಡಿ, ಚೆನ್ನಕೃಷ್ಣ, ಗಂಗಾಧರ್, ಜೀವನ್ ರೆಡ್ಡಿ, ಗುಲ್ಲೇಟಿ, ಶ್ರೀರಾಮ, ಸಂದೀಪ್, ಬಿಂದು ಮಾಧವ್, ಅಯ್ಯಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-18-1532278606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.