ಬಂಗಾರಪೇಟೆ: ಕಾಮಸಮುದ್ರ ರೈಲ್ವೆ ಗೇಟ್ ಸಾರ್ವಜನಿಕರ ಪಾಲಿಗೆ ಶಾಪವಾಗಿದ್ದು, ಕಳೆದ ಎರಡು ದಶಕಗಳಿಂದ ಮೇಲ್ಸೇತುವೆ ನಿರ್ಮಿಸಬೇಕೆಂಬ ಕೂಗು ಕೇಳಿಬರುತ್ತಿದ್ದರೂ, ಸರ್ಕಾರ ಮತ್ತು ರೈಲ್ವೆ ಇಲಾಖೆಯ ಮೌನ ರೈತ ಸಂಘದ ಆಕ್ರೋಶಕ್ಕೆ ಕಾರಣವಾಗಿದೆ.

ತಾಲ್ಲೂಕಿನ ಕಾಮಸಮುದ್ರ ರೈಲ್ವೆ ಗೇಟ್ ಬಳಿ ಗುರುವಾರ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಮತ್ತು ಚೆನ್ನೈ ನಗರಗಳನ್ನು ಸಂಪರ್ಕಿಸುವ ಈ ಮಾರ್ಗದಲ್ಲಿ ನಿರಂತರವಾಗಿ ರೈಲುಗಳ ಸಂಚಾರವಿರುತ್ತದೆ. ಹಾಗಾಗಿ ದಿನದ ಬಹುಪಾಲು ಸಮಯ ರೈಲ್ವೆ ಗೇಟ್ ಮುಚ್ಚಿರುತ್ತದೆ. ಇದರಿಂದ ಸಾರ್ವಜನಿಕರು ಸಕಾಲಕ್ಕೆ ತಮ್ಮ ಕೆಲಸ ಕಾರ್ಯಗಳಿಗೆ ತಲುಪಲಾಗದೆ ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯುವಂತಾಗಿದೆ. ಆಂಬುಲೆನ್ಸ್ ಸಂಚಾರಕ್ಕೆ ಈ ಗೇಟ್ ದೊಡ್ಡ ತಡೆಗೋಡೆಯಾಗಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಸಾಧ್ಯವಾಗದೆ ಪ್ರಾಣಾಪಾಯ ಸಂಭವಿಸುವ ಭೀತಿಯೂ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸದರು ಹಾಗೂ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ, ಈವರೆಗೂ ಪ್ರಯೋಜನವಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಜನಪ್ರತಿನಿಧಿಗಳು ಮೇಲ್ಸೇತುವೆ ನಿರ್ಮಾಣದ ಭರವಸೆ ನೀಡುತ್ತಾರೆ. ಆದರೆ, ಗೆದ್ದ ನಂತರ ಈ ಭಾಗದ ಕಡೆಗೆ ತಿರುಗಿಯೂ ನೋಡುವುದಿಲ್ಲ ಎಂದು ದೂರಿದರು.

ಸರ್ಕಾರ ಮತ್ತು ರೈಲ್ವೆ ಇಲಾಖೆ ಕೂಡಲೇ ಎಚ್ಚೆತ್ತು ಮೇಲ್ಸೇತುವೆ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಭಾಗದ ಎಲ್ಲಾ ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಪ್ಪೋಜಿರಾವ್, ಮುನಿಕೃಷ್ಣ, ಬೀಮಗಾನಹಳ್ಳಿ ಮುನಿರಾಜು, ಗೋವಿಂದಪ್ಪ, ಪುತ್ತೇರಿರಾಜು, ಗಿರೀಶ್, ಕಿರಣ್, ಚಾಂದ್ ಪಾಷ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-18-1080464468

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.