ಬಂಗಾರಪೇಟೆ: ತಾಲ್ಲೂಕಿನ ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ ಆಲಿಸಲು ಮತ್ತು ಪರಿಹರಿಸಲು ಬುಧವಾರ ನೀರಿನ ಅದಾಲತ್ ಕಾರ್ಯಕ್ರಮ ನಡೆಯಿತು.

ಬೇಸಿಗೆಯ ಹಿನ್ನೆಲೆ ಗ್ರಾಮಗಳಲ್ಲಿ ಉದ್ಭವಿಸಿರುವ ನೀರಿನ ಅಭಾವ ಹಾಗೂ ಪೂರೈಕೆಯಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಈ ಅದಾಲತ್ ನಡೆಯಿತು. ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ಪೈಪ್ಲೈನ್ ಸೋರಿಕೆ, ಪಂಪ್ಸೆಟ್ ದುರಸ್ತಿ ಹಾಗೂ ನೀರಿನ ಅಸಮರ್ಪಕ ಹಂಚಿಕೆಯ ಬಗ್ಗೆ ದೂರುಗಳನ್ನು ಸಲ್ಲಿಸಿದರು.

ಸಾರ್ವಜನಿಕರ ಅಹವಾಲು ಆಲಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಣಿ, ತಕ್ಷಣವೇ ಕೈಗೊಳ್ಳಬಹುದಾದ ದುರಸ್ತಿ ಕಾರ್ಯಗಳನ್ನು ಎರಡು ದಿನಗಳ ಒಳಗಾಗಿ ಪೂರ್ಣಗೊಳಿಸುವಂತೆ ತಾಂತ್ರಿಕ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದೇ ವೇಳೆ, ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡಬಾರದು ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಗ್ರಾಮೀಣ ಭಾಗದ ಕೆರೆಗಳು ಮತ್ತು ಹಳ್ಳ-ಕೊಳ್ಳಗಳು ಬತ್ತುತ್ತಿರುವುದರಿಂದ ಜಾನುವಾರುಗಳು ಕುಡಿಯುವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪಂಚಾಯಿತಿ ಆಡಳಿತವು, ಹೈನುಗಾರರ ಹಿತದೃಷ್ಟಿಯಿಂದ ಗ್ರಾಮಗಳಲ್ಲಿನ ಜಾನುವಾರುಗಳ ನೀರಿನ ತೊಟ್ಟಿಗಳಿಗೆ ಪ್ರತಿದಿನ ಸಕಾಲಕ್ಕೆ ನೀರು ತುಂಬಿಸುವಂತೆ ಆದೇಶಿಸಿದೆ.

ಗ್ರಾಮಗಳಲ್ಲಿ ನೀರು ಸರಬರಾಜು ಮಾಡುವ ನೀರಗಂಟಿಗಳು ಕಡ್ಡಾಯವಾಗಿ ಜಾನುವಾರುಗಳ ತೊಟ್ಟಿಗಳಿಗೂ ನೀರು ಹರಿಸಬೇಕು. ಇದರಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬಾರದು ಎಂದು ತಾಕೀತು ಮಾಡಲಾಗಿದೆ. ಕೇವಲ ನೀರು ತುಂಬಿಸುವುದಷ್ಟೇ ಅಲ್ಲದೆ, ತೊಟ್ಟಿಗಳಲ್ಲಿ ಪಾಚಿ ಕಟ್ಟದಂತೆ ಮತ್ತು ಕಸ ಕಡ್ಡಿ ಬೀಳದಂತೆ ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ತಾಜಾ ನೀರು ತುಂಬಿಸಬೇಕು. ಇದರಿಂದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.

ಎಂಜಿನಿಯರ್ ಮಂಜುನಾಥ, ಕಾರ್ಯದರ್ಶಿ ರಾಮಭದ್ರಪ್ಪ, ಗ್ರಾಮ ಆಡಳಿತಾಧಿಕಾರಿ ವಿಜಯ್ ಚೌವ್ಹಾಣ್, ಡಿಇಒ ಮುರಳಿ, ಜಿ.ನಾರಾಯಣ, ಚಂದ್ರಮೌಳಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-18-142690413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.