ವೇಮಗಲ್: ನರಸಾಪುರ ಹೋಬಳಿಯ ವ್ಯಾಪ್ತಿಯಲ್ಲಿರುವ ಬೆಳ್ಳೂರು ಗ್ರಾಮವು ಕಸದ ಸುಳಿಗೆ ಸಿಲುಕಿ ನಲುಗುತ್ತಿದೆ.

ಹೊಯ್ಸಳರ ಕಾಲದ ಇತಿಹಾಸ ಹೊಂದಿರುವ ಬೆಳ್ಳೂರು ಗ್ರಾಮವು ಸುಂದರ ಶಿಲ್ಪಕಲೆ ಒಳಗೊಂಡ ದೇವಸ್ಥಾನಗಳಿಗೆ ಹೆಸರುವಾಸಿಯಾಗಿದೆ. ಅಂತಹ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿರುವುದು ಶೋಚನೀಯ.

ಗ್ರಾಮದ ಪ್ರತಿ ರಸ್ತೆಯ ತಿರುವಿನಲ್ಲಿಯೂ ಕಸದ ರಾಶಿಗಳು ರಾರಾಜಿಸುತ್ತಿವೆ. ಚರಂಡಿಗಳು ಹೂಳು ತುಂಬಿದ್ದು, ನೀರು ಸರಾಗವಾಗಿ ಹರಿಯುತ್ತಿಲ್ಲ. ಹಾಗಾಗಿ ನೀರು ದುರ್ವಾಸನೆ ಬರುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಸಂಚರಿಸಬೇಕಾಗಿದೆ.

ವೇಮಗಲ್ನಿಂದ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸಲು ಈ ಗ್ರಾಮದ ಮೂಲಕ ಹಾದುಹೋಗಬೇಕಿದೆ. ಇಂತಹ ಗ್ರಾಮದ ರಸ್ತೆ ಬದಿಯಲ್ಲಿ ಕಸದ ತ್ಯಾಜ್ಯ ರಾರಾಜಿಸುತ್ತಿದೆ.

ಬೆಳ್ಳೂರು ವ್ಯಾಪ್ತಿಯಲ್ಲಿ ಸುಸಜ್ಜಿತ ಶಾಲಾ-ಕಾಲೇಜು, ಆಧುನಿಕ ಆಸ್ಪತ್ರೆಗಳನ್ನು ಹೊಂದಿದೆ. ಆದರೆ, ಸ್ವಚ್ಛತೆ ಮರೀಚಿಕೆಯಾಗಿದೆ. ಗ್ರಾಮದ ಪ್ರವೇಶ ದ್ವಾರದಲ್ಲಿ ಕಸದ ರಾಶಿ ಸ್ವಾಗತ ಕೋರುತ್ತಿರುವುದು ವಿಷಾದನೀಯ. ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಕೊಳವೆಬಾವಿಯೂ ಕಸದ ರಾಶಿಯ ಮಧ್ಯೆ ಇರುವುದು ಆತಂಕದ ವಿಷಯವಾಗಿದೆ. ತ್ಯಾಜ್ಯದ ನೀರು ಅಂತರ್ಜಲ ಸೇರಿ ನೀರಿನ ಮೂಲಗಳು ಕಲುಷಿತಗೊಳ್ಳುವ ಸಾಧ್ಯತೆಗಳಿವೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

ಮುಖ್ಯ ರಸ್ತೆಯ ಪಕ್ಕದಲ್ಲಿ ಸಾಗುವ ರಾಜಕಾಲುವೆ ತುಂಬಾ ಕಸದ ರಾಶಿ ತುಂಬಿಕೊಂಡಿದೆ. ಮಳೆ ಬಂದರೆ ಮಳೆ ನೀರಿನ ಜೊತೆ ಈ ಅಷ್ಟು ಕಸವು ಕೆರೆ ಸೇರುತ್ತದೆ. ಇನ್ನೂ ಚರಂಡಿಗಳಲ್ಲಿ ಗಿಡಗಂಟಿ ಬೆಳೆದದ್ದು ಹೂಳು ತುಂಬಿರುವುದರಿಂದ ಸೊಳ್ಳೆ ಸಂತತಿ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗದ ಸಾರ್ವಜನಿಕರಲ್ಲಿ ಎದುರಾಗಿದೆ.

ನರಸಾಪುರ ಮತ್ತು ವೇಮಗಲ್ ಕೈಗಾರಿಕಾ ಪ್ರದೇಶವು ದಿನೇ ದಿನೇ ಬೆಳೆಯುತ್ತಿದೆ. ಇಲ್ಲಿ ಜನಸಂಖ್ಯೆ ಹೆಚ್ಚಾದಂತೆ ತ್ಯಾಜ್ಯ ಪ್ರಮಾಣವೂ ಹೆಚ್ಚಾಗುತ್ತದೆ. ಹಾಗಾಗಿ ಇನ್ನಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಬೆಳ್ಳೂರು ಗ್ರಾಮವನ್ನು ಕಸಮುಕ್ತಗೊಳಿಸಿ, ಕಸದ ವೈಜ್ಞಾನಿಕ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಗ್ರಾಮ ಪಂಚಾಯಿತಿಯ ಕ್ರಮಗಳ ಬಗ್ಗೆ ವಿಚಾರಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕರೆ ಮಾಡಿದರೂ, ಸ್ವೀಕರಿಸಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-18-1220219495

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.