ಬೇತಮಂಗಲ: ನಗರದಲ್ಲಿ ಹಾಡುಹಗಲೇ ನ್ಯಾಯಾಲಯದ ಉದ್ಯೋಗಿಯೊಬ್ಬರ ಹಣ ದೋಚಲು ಯತ್ನಿಸಿದ್ದ ನಾಲ್ವರ ಪೈಕಿ ಒಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ನ್ಯಾಯಾಲಯದ ಉದ್ಯೋಗಿ ರಮೇಶ್ ಎಂಬುವವರು ಸ್ಥಳೀಯ ಕೆನರಾ ಬ್ಯಾಂಕ್ನಿಂದ ₹1 ಲಕ್ಷ ನಗದನ್ನು ಡ್ರಾ ಮಾಡಿ, ಆ ಹಣವನ್ನು ತಮ್ಮ ಸ್ಕೂಟರ್ನ ಡಿಕ್ಕಿಯಲ್ಲಿಟ್ಟು ಸಾಗುತ್ತಿದ್ದರು. ಇವರನ್ನು ಹಿಂಬಾಲಿಸಿದ ನಾಲ್ವರು ಬಸ್ ನಿಲ್ದಾಣದ ಬಳಿ ಹಣ ದೋಚಲು ಯತ್ನಿಸಿದ್ದಾರೆ. ಇದನ್ನು ಗಮನಿಸಿ ಸಾರ್ವಜನಿಕರು ಕಳ್ಳರನ್ನು ಬೆನ್ನಟ್ಟಿದ್ದಾರೆ. ಮೂವರು ಪರಾರಿಯಾಗಿದ್ದು, ಒಬ್ಬ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸಾರ್ವಜನಿಕರು ಧರ್ಮದೇಟು ನೀಡಿ ಬೇತಮಂಗಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಮೂವರು ಆರೋಪಿಗಳಿಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-18-911405289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.