ಬೇತಮಂಗಲ: ಪಟ್ಟಣ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಆಲಿಕಲ್ಲು ಸಹಿತ ಭಾರಿ ಗಾಳಿ ಮಳೆಯಿಂದಾಗಿ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕ್ಯಾಸಂಬಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ನೈಸರ್ಗಿಕ ವಿಕೋಪಕ್ಕೆ ಕೋಳಿ ಫಾರಂ ಮತ್ತು ವಿವಿಧ ಬೆಳೆಗಳು ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ರೈತರು ತಮಗೆ ಸೂಕ್ತ ಪರಿಹಾರ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

600 ಎಕರೆ ಬೆಳೆ ಹಾನಿ: ಕ್ಯಾಸಂಬಳ್ಳಿ ವ್ಯಾಪ್ತಿಯ ಕರಡಗೂರು, ಮಾಜರಾರೆಡ್ಡಿಹಳ್ಳಿ, ನಕ್ಕನಹಳ್ಳಿ, ಚಿಂಚಾಂಡ್ಲಹಳ್ಳಿ, ಏತೂರು, ಮರವೂರು, ಕಸಿರೆಡ್ಡಿಗಾಂಡ್ಲಹಳ್ಳಿ, ಐವಾರಹಳ್ಳಿ ಮತ್ತು ಕಣ್ಣೂರು ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಸುಮಾರು 600 ಎಕರೆ ಬೆಳೆ ಹಾನಿಯಾಗಿದೆ.

ಕಟಾವಿನ ಹಂತದಲ್ಲಿದ್ದ ಬೆಳೆಗಳು ಮತ್ತು ಹಣ್ಣಿನ ಗಿಡಗಳು ಬಿರುಗಾಳಿಗೆ ನೆಲಕ್ಕುರುಳಿವೆ. ಮರದ ಕೊಂಬೆಗಳು ಮುರಿದು ಬಿದ್ದಿವೆ. ಕಾಯಿಗಳು ಅಕಾಲಿಕವಾಗಿ ಉದುರಿ ಹೋಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭತ್ತ, ಜೋಳ, ಬೀನ್ಸ್ ಮತ್ತು ಟೊಮೆಟೊ ಸೇರಿದಂತೆ ಬಹುತೇಕ ತರಕಾರಿ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ.

ಕಂಗಾಂಡ್ಲಹಳ್ಳಿ ಬಳಿಯ ಮುನಿರತ್ನಂ ನಾಯ್ಡು ಅವರ ಕೋಳಿ ಫಾರಂ ಶೆಡ್ ಶಿಟ್ಗಳು ಬಿರುಗಾಳಿಗೆ ಹಾರಿಹೋಗಿವೆ. ಈ ಶಿಟ್ಗಳು ಹತ್ತಿರದ 11 ಕೆ.ವಿ ವಿದ್ಯುತ್ ಲೈನ್ ಅಪ್ಪಳಿಸಿದ ಪರಿಣಾಮ, ರಸ್ತೆಯಲ್ಲಿದ್ದ 3 ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಸುಮಾರು 12 ಕಂಬಗಳು ಮುರಿದು ಬಿದ್ದಿವೆ.

ತ್ವರಿತ ಪರಿಹಾರಕ್ಕೆ ಒತ್ತಾಯ: ಕೆಜಿಎಫ್ ತಾಲ್ಲೂಕು ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಭಿಲಾಶ್ ರೆಡ್ಡಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ವೈಜ್ಞಾನಿಕ ಸಮೀಕ್ಷೆ ನಡೆಸಿ, ಸಂಕಷ್ಟದಲ್ಲಿರುವ ರೈತರಿಗೆ ತ್ವರಿತವಾಗಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-18-592702898

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.