ಬೇತಮಂಗಲ: ಇಲ್ಲಿನ ಕರಗ ಮಹೋತ್ಸವ ಹಾಗೂ ರಾಮ ನವಮಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಸ್ತೆ ಬದಿ ಹಾಗೂ ಬಸ್ ನಿಲ್ದಾಣಗಳಲ್ಲಿ ರಾಜಕೀಯ ಪಕ್ಷರ ಮುಖಂಡರ ಬ್ಯಾನರ್ ಹಾವಳಿ ಹೆಚ್ಚಾಗಿದೆ.

ಗ್ರಾಮದ ಬಸ್ ನಿಲ್ದಾಣ ಮತ್ತು ಮುಖ್ಯ ರಸ್ತೆಗಳಲ್ಲಿ ವಿವಿಧ ಪಕ್ಷಗಳ ಮುಖಂಡರು ತಾ ಮುಂದು, ನಾ ಮುಂದು ಎನ್ನುವಂತೆ ಬ್ಯಾನರ್ ಹಾಕಲಾಗಿದೆ. ಇದು ಕೇವಲ ಹಬ್ಬದ ಶುಭಾಶಯಕ್ಕೆ ಸೀಮಿತವಾಗದೆ, ರಾಜಕೀಯ ಬಲಪ್ರದರ್ಶನದ ವೇದಿಕೆಯಂತಾಗಿವೆ.

ರಸ್ತೆ ತಿರುವು ಮತ್ತು ರಸ್ತೆಗೆ ಅಡ್ಡಲಾಗಿ ಅಳವಡಿಸಿರುವ ಬ್ಯಾನರ್ಗಳಿಂದಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಬ್ಯಾನರ್ಗಳಿಂದ ಪಾದಚಾರಿಗಳು ಸಂಚರಿಸಲು ಕಷ್ಟವಾಗುತ್ತಿದೆ.

ಬ್ಯಾನರ್ ಹಾವಳಿ ಹೆಚ್ಚಾಗಿದರೂ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಜಾರಿದ್ದಾರೆ. ಸಾರ್ವಜನಿಕರ ಹಿತಾಸಕ್ತಿಯಿಂದ ಅಧಿಕಾರಿಗಳು ಬ್ಯಾನರ್ ತೆರವುಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-18-144199397

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.