ಬೇತಮಂಗಲ: ಪಿಆರ್ಇಡಿ ಯೋಜನೆಯಡಿ ಸಿಸಿ ರಸ್ತೆ ನಿರ್ಮಾಣ ಮಾಡದೆ ಹಣ ಲೂಟಿ ಮಾಡಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

2025ರ ಫೆಬ್ರವರಿಯಲ್ಲಿ ಬೇತಮಂಗಲ ಗ್ರಾಮದ ವಾಟರ್ ವರ್ಕ್ಸ್ ವೃತ್ತದಿಂದ ಅರುಣ್ ಹೀರೆಮಠ್ ಅವರ ಮನೆವರೆಗಿನ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ ಎಂದು ನಕಲಿ ದಾಖಲೆ ಸೃಷ್ಟಿಸಿ, ಲಕ್ಷಾಂತರ ರೂಪಾಯಿ ಹಣ ಡ್ರಾ ಮಾಡಲಾಗಿದೆ. ಆದರೆ, ಒಂದು ವರ್ಷ ಕಳೆದರೂ ಯಾವುದೇ ಕಾಮಗಾರಿ ಕೈಗೊಳ್ಳದೆ, ಗುರುವಾರ ರಾತ್ರೋರಾತ್ರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಕೈಗೊಳ್ಳಲು ಮುಂದಾಗಿದ್ದಾರೆ. ಈ ನಡೆಯನ್ನು ಪ್ರಬುದ್ಧ ಪ್ರಜಾ ವೇದಿಕೆ ಸಂಘಟನೆ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ 20 ದಿನಗಳ ಹಿಂದೆಯೇ ಪ್ರಬುದ್ಧ ಪ್ರಜಾ ವೇದಿಕೆಯು ಪತ್ರಿಕಾಗೋಷ್ಠಿ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಗುತ್ತಿಗೆದಾರರ ಮೇಲೆ ಒತ್ತಡ ಹಾಕಿ ತರಾತುರಿಯಲ್ಲಿ ಕಾಮಗಾರಿ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

‘ಕಾಮಗಾರಿ ಮಾಡದೆಯೇ ಲಕ್ಷಾಂತರ ರೂಪಾಯಿ ಬಿಲ್ ಪಡೆದಿರುವುದು ಅಕ್ಷಮ್ಯ ಅಪರಾಧ. ನಾವು ಪ್ರಶ್ನೆ ಮಾಡಿದ ನಂತರ ಸಾಕ್ಷಿ ನಾಶಪಡಿಸಲು ರಾತ್ರೋ ರಾತ್ರಿ ಗುತ್ತಿಗೆದಾರರು ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದರಲ್ಲಿ ಪಿಆರ್ಇಡಿ ಇಲಾಖೆಯ ಎಂಜಿನಿಯರ್ಗಳು ಸಂಪೂರ್ಣ ಶಾಮೀಲಾಗಿದ್ದಾರೆ’ ಎಂದು ಪ್ರಬುದ್ಧ ಪ್ರಜಾ ವೇದಿಕೆ ಸಂಸ್ಥಾಪಕ ಶ್ರೀನಾಥ್ ನಾಸ್ತಿಕ್ ಆರೋಪಿಸಿದರು.

ಈ ಪ್ರಕರಣವನ್ನು ಉನ್ನತ ಮಟ್ಟದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿರುವ ಎಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-18-1094056378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.