ಬೇತಮಂಗಲ: ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಡಿವಾಳ ಗ್ರಾಮದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಜಾಗೃತಿಗಾಗಿ ಬೀಟ್ ಸಭೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಬೇತಮಂಗಲ ವೃತ್ತ ನಿರೀಕ್ಷಕ ರಂಗಶಾಮಯ್ಯ ವಿವಿಧ ಸಾಮಾಜಿಕ ಪಿಡುಗುಗಳು ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಿದರು.

ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಚಾಲನಾ ಪರವಾನಗಿ ಹೊಂದಿರಬೇಕು. ಅತಿ ವೇಗವಾಗಿ ಚಾಲನೆ ಮಾಡುವುದರಿಂದ ಆಗುವ ಅನಾಹುತಗಳ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ವಹಿಸಿ: ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಅಪರಿಚಿತ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು. ಒಟಿಪಿ ಹಂಚಿಕೊಳ್ಳಬಾರದು, ಮತ್ತು ಆನ್ಲೈನ್ ವಂಚನೆಗೆ ಒಳಗಾದಲ್ಲಿ ತಕ್ಷಣ 1930 ಸಹಾಯವಾಣಿಗೆ ಕರೆ ಮಾಡಲು ತಿಳಿಸಿದರು.

ಈ ವೇಳೆ ಕ್ಯಾಸಂಬಳ್ಳಿ ಪೊಲೀಸ್ ಠಾಣೆ ಪಿಎಸ್ಐ ಸಂಗಮೇಶ್, ಸಿಬ್ಬಂದಿ ಹಾಗೂ ಮಡಿವಾಳ ಗ್ರಾಮದ ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-18-1350510254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.