ಬೇತಮಂಗಲ: ಕ್ಯಾಸಂಬಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ವತ್ಸಲ ಸಮುದಾಯ ಆರೋಗ್ಯ ಕೇಂದ್ರದ ವಿರುದ್ಧ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಕ್ಲಿನಿಕ್ ವಿರುದ್ಧ ಪ್ರಬುದ್ಧ ಪ್ರಜಾ ವೇದಿಕೆಯ ಪದಾಧಿಕಾರಿಗಳು ದೂರು ದಾಖಲಿಸಿದ್ದಾರೆ.

ಕ್ಲಿನಿಕ್ಗೆ ಭೇಟಿ ನೀಡಿದ್ದ ಪದಾಧಿಕಾರಿಗಳು ದಾಖಲೆಗಳ ಬಗ್ಗೆ ವೈದ್ಯರನ್ನು ಪ್ರಶ್ನಿಸಲು ಮುಂದಾದಾಗ, ವೈದ್ಯರು ಕೇಂದ್ರಕ್ಕೆ ಬೀಗ ಹಾಕಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಪದಾಧಿಕಾರಿಗಳು ವೈದ್ಯರನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಜೊತೆಗೆ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ಪೊಲೀಸ್ ಇಲಾಖೆಯು ದಾಖಲೆಗಳನ್ನು ಪರಿಶೀಲಿಸಿ, ಅಕ್ರಮ ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಘಟನೆಯ ಅಧ್ಯಕ್ಷ ಶ್ರೀನಾಥ್ ನಸ್ತಿಕ್ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-18-679830000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.