ಬೇತಮಂಗಲ: ಸಮೀಪದ ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನೀರಿನ ಅದಾಲತ್ ಸಭೆ ನಡೆಯಿತು.

ಈ ವೇಳೆ ಆಡಳಿತಾಧಿಕಾರಿ ರಾಜಶೇಖರ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೈಪ್ಲೈನ್ ಸೋರಿಕೆ ಅಥವಾ ಮೋಟಾರ್ ದುರಸ್ತಿ ಕಂಡುಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಏಜಾಜ್ ಪಾಷಾ ಮಾತನಾಡಿ, ನೀರಿನ್ನು ಪೋಲು ಮಾಡದಿರುವುದು ನಮ್ಮೆಲ್ಲರ ಜವಾಬ್ದಾರಿ. ಗ್ರಾಮಸ್ಥರು ನೀರಿನ ತೆರಿಗೆಯನ್ನು ಸಕಾಲಕ್ಕೆ ಪಾವತಿಸುವ ಮೂಲಕ ಪಂಚಾಯಿತಿ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮದ ಮುಖಂಡರು ತಮ್ಮ ಗ್ರಾಮಗಳಲ್ಲಿನ ನೀರಿನ ಸಮಸ್ಯೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲು ಆಲಿಸಿದ ಅಧಿಕಾರಿಗಳು, ಸಮಸ್ಯೆಗಳ ನಿವಾರಣೆಗೆ ಸ್ಥಳದಲ್ಲೇ ಸಂಬಂಧಪಟ್ಟ ಸಿಬ್ಬಂದಿಗೆ ಸೂಚನೆ ನೀಡಿದರು.

ಕಾರ್ಯದರ್ಶಿ ವಿಜಿ ಕುಮಾರ್ ಸೇರಿದಂತೆ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-18-813392191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.