ಕೆಜಿಎಫ್: ಬಿಜಿಎಂಎಲ್ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಗಣಿ ಖಾತೆ ಸಚಿವರು ಕೋಲಾರದ ಸಂಸದರನ್ನು ಜೂನ್ 4ರಂದು ಮಾತುಕತೆಗೆ ಆಹ್ವಾನಿಸಿರುವುದರಿಂದ ಬಿಜಿಎಂಎಲ್ ಕಾರ್ಮಿಕರು ಪ್ರತಿಭಟನೆಯನ್ನು ಕೈಬಿಡಲಾಗಿದೆ ಎಂದು ಬಿಜಿಎಂಎಲ್ ನಿವೃತ್ತ ಕಾರ್ಮಿಕ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಕೆ.ರಾಜೇಂದ್ರನ್, ಕಾರ್ಮಿಕರ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಬಹಳ ವರ್ಷಗಳಿಂದ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಕೇಂದ್ರ ಗಣಿ ಖಾತೆಯ ಸಚಿವಾಲಯದಿಂದ ಸೂಕ್ತ ಸ್ಪಂದನೆ ಸಿಕ್ಕಿರಲಿಲ್ಲ. ಕಾರ್ಮಿಕರು 26 ವರ್ಷಗಳಿಂದ ಬೇಡಿಕೆ ಈಡೇರಿಸಿಕೊಳ್ಳಲು ಸಾಕಷ್ಟು ಹೋರಾಟ ನಡೆಸಿದ್ದಾರೆ. ಎಸ್ಟಿಬಿಪಿ ಯೋಜನೆಯಲ್ಲಿ ಸ್ವಯಂ ನಿವೃತ್ತಿ ಪಡೆದ ಕಾರ್ಮಿಕರಿಗೆ ಎಲ್ಲಾ ರೀತಿಯ ಸೌಲಭ್ಯ ಸಿಗುವುದಾಗಿ ಆಸೆ ಹುಟ್ಟಿಸಿದ್ದರು. ಗ್ಲೋಬಲ್ ಟೆಂಡರ್ ಕರೆಯಲಾಗುವುದು. ಕಾರ್ಮಿಕರಿಗೆ ಕೆಲಸ ಸಿಗುವುದು ಜೊತೆಗೆ ಪರಿಹಾರ ಹಣ ಕೂಡ ದೊರೆಯುತ್ತದೆ ಎಂದು ಭರವಸೆ ನೀಡಿದ್ದರು. ಆದರೆ, ಇದುವರೆವಿಗೂ ಯಾವ ಭರವಸೆಯೂ ಈಡೇರಿಲ್ಲ ಎಂದು ದೂರಿದರು.

ಗಣಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೊನೆಗೂ ಕೇಂದ್ರ ಗಣಿ ಖಾತೆಯ ಸಚಿವ ಕಿಶನ್ ರೆಡ್ಡಿ ಕೊನೆಗೂ ಒಪ್ಪಿಗೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಯಾವುದಾದರೂ ಪರಿಹಾರ ಸಿಗಬಹುದು ಎಂಬ ಆಶಯದಿಂದ ಉದ್ದೇಶಿತ ಮುಷ್ಕರನ್ನು ಕೈಬಿಟ್ಟಿರುವುದಾಗಿ ಅವರು ತಿಳಿಸಿದ್ದಾರೆ.

ನಗರಸಭೆ ಮಾಜಿ ಅಧ್ಯಕ್ಷ ದಯಾನಂದ, ನಿವೃತ್ತ ಕಾರ್ಮಿಕ ಸಂಘದ ಕಾರ್ಯದರ್ಶಿ ವಿಜಯರಾಘವನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-18-753342233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.