ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹ 10 ಕೋಟಿ ವೆಚ್ಚದಲ್ಲಿ ಎರಡು ಕಡೆ ಸೇತುವೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾಲ್ಲೂಕಿನ ಕ್ಯಾಲನೂರು ಸಮೀಪ ₹ 6 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ಹಾಗೂ ಛತ್ರಕೋಡಹಳ್ಳಿ ಬಳಿ ₹ 4 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಿಸಲು ಒಪ್ಪಿಗೆ ಲಭಿಸಿದೆ. ಅನುದಾನ ಬಿಡುಗಡೆಗೂ ಅನುಮೋದನೆ ಲಭಿಸಿದೆ. ಕ್ಷೇತ್ರದಲ್ಲಿ ಒಂದಲ್ಲ ಒಂದು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಿಗುತ್ತಲೇ ಇದೆ’ ಎಂದರು.

ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿಗಳ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವ ಪ್ರಕ್ರಿಯೆ ಶುರುವಾಗಿದ್ದು, ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿ ಕಾಮಗಾರಿ ಆರಂಭಿಸಲಾಗುವುದು. ಇಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಟ್ಟದಲ್ಲಿ ಕೆಲಸ ಆಗುವುದಿಲ್ಲ. ವಿಧಾನಸೌಧ ಸುತ್ತಾಡಿ ಕ್ಷೇತ್ರಕ್ಕೆ ಕಾಮಗಾರಿ ಮಾಡಿಸಿಕೊಂಡು ಬಂದಿದ್ದೇನೆ. ಅಭಿವೃದ್ಧಿಗೆ ಅನುದಾನ ಕೇಳಿದಾಗ ಯಾರೂ ಇಲ್ಲ ಎನ್ನುವುದಿಲ್ಲ ಎಂದು ಹೇಳಿದರು.

ಅಧಿಕಾರಿಗಳು ಹಾಗೂ ಸಿಬ್ಬಂದಿ ನಮ್ಮ ವೇಗಕ್ಕೆ ಸ್ಪಂದಿಸುತ್ತಿಲ್ಲ. ಜೊತೆಗೆ ಹಲವಾರು ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯೂ ಇದೆ. ಸರಿಯಾಗಿ ಕೆಲಸ ಮಾಡದ ಸಿಬ್ಬಂದಿಯನ್ನು ಅಮಾನತು ಮಾಡಬಹುದು. ಆದರೆ, ಸಿಬ್ಬಂದಿ ಕೊರತೆ ಕಾರಣ ಮತ್ತಷ್ಟು ಸಮಸ್ಯೆ ಉಂಟಾಗುತ್ತದೆ, ಕೆಲಸಗಳು ವಿಳಂಬವಾಗುತ್ತವೆ. ಉಳಿದ ಕ್ಷೇತ್ರಗಳ ಸ್ಥಿತಿಗತಿಗೆ ಹೋಲಿಸಿದರೆ ಕೋಲಾರ ಕ್ಷೇತ್ರ ಪರವಾಗಿಲ್ಲ ಎಂದು ತಿಳಿಸಿದರು.

ಈಗ ಒಳಮೀಸಲಾತಿ ವಿಂಗಡಣೆ ನಡೆದಿದ್ದು, ಸದ್ಯದಲ್ಲೇ 56 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಆಗ ಕೋಲಾರದಲ್ಲಿಯೂ ಸಿಬ್ಬಂದಿ ಕೊರತೆಗೆ ಮುಕ್ತಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕೋಮುಲ್ ನಿರ್ದೇಶಕ ಶಂಷೀರ್ ಹಾಗೂ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-18-832378984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.