ಕೋಲಾರ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ರಾಮಸಂದ್ರ ಗೇಟ್ ಬಳಿ ಶನಿವಾರ ಕಾರು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಳಬಾಗಿಲು ತಾಲ್ಲೂಕಿನ ನಾಗಮಂಗಲ ಗ್ರಾಮದ ವಿಶ್ವನಾಥ್ ಹಾಗೂ ಶಂಕರಪ್ಪ ಮೃತರು.
ವೇಗವಾಗಿ ಬಂದ ಸ್ವಿಫ್ಟ್ ಡಿಸೈರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.