ಕೋಲಾರ: ಜಾತಿ ಪ್ರಮಾಣಪತ್ರ ವಿತರಿಸುವಾಗ ಎಚ್ಚರಿಕೆ ವಹಿಸಬೇಕು. ಯಾವುದೇ ಅಕ್ರಮಗಳು ನಡೆಯದಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ಸೌಲಭ್ಯಗಳ ವಿತರಣೆಯಲ್ಲಿ ವಿಳಂಬ ಸಹಿಸುವ ಪ್ರಶ್ನೆ ಇಲ್ಲ ಎಂದು ಅವರು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪರಿಶಿಷ್ಟ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳು, ವಿದ್ಯಾರ್ಥಿವೇತನ, ಜಮೀನು ಮಂಜೂರಾತಿ ಮತ್ತು ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಸ್ಥಿತಿಗತಿಯ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳಲ್ಲಿ ಬಾಕಿ ಉಳಿದಿರುವ ವಿದ್ಯಾರ್ಥಿವೇತನದ ಮೊತ್ತವನ್ನು ವಿಳಂಬವಿಲ್ಲದೆ ವಿದ್ಯಾರ್ಥಿಗಳಿಗೆ ತಲುಪಿಸಬೇಕು ಎಂದು ತಹಶೀಲ್ದಾರ್ಗಳಿಗೆ ನಿರ್ದೇಶನ ನೀಡಿದರು.

ಪರಿಶಿಷ್ಟ ಸಮುದಾಯಕ್ಕೆ ಸಂಬಂಧಿಸಿದ ಜಮೀನು ಮಂಜೂರಾತಿ ಮತ್ತು ಭೂಮಿ ಹಕ್ಕುಗಳ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಪಡಿಸಿ, ಅರ್ಹರಿಗೆ ಭೂಮಿಯ ಹಕ್ಕು ದೊರಕಿಸಿಕೊಡಬೇಕೆಂದು ತಿಳಿಸಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತಾಗಬೇಕು. ಇಡೀ ಜಿಲ್ಲಾಡಳಿತ ಬಲಿಷ್ಠ ತಂಡವಾಗಿ ಕಾರ್ಯನಿರ್ವಹಿಸುವ ಮೂಲಕ ಈ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಜಿಲ್ಲೆಯ ಹೊರವಲಯದ ಕೆಲ ಪ್ರದೇಶಗಳಲ್ಲಿ ದಿನಸಿ ಹಾಗೂ ಇತರೆ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವುದಾಗಿ ಸಮಿತಿ ಸದಸ್ಯರು ಗಮನಕ್ಕೆ ತಂದರು. ಈ ಬಗ್ಗೆ ನಿಗಾ ಇಟ್ಟಿರುವುದಾಗಿ ಅಬಕಾರಿ ಅಧಿಕಾರಿಗಳು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್, ಎಲ್ಲಾ ತಾಲ್ಲೂಕಿನ ತಹಶೀಲ್ದಾರ್ಗಳು, ಸಮಿತಿ ಸದಸ್ಯರು ಮತ್ತು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-18-1353952763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.