ಚೇಳೂರು: ತಾಲ್ಲೂಕಿನ ನಾರೇಮದ್ದೇಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ಬರೋಬ್ಬರಿ ಮೂರು ವರ್ಷಗಳೇ ಕಳೆದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸುತ್ತಿಲ್ಲ.

ಅಧಿಕಾರಿಗಳ ಈ ಮೌನ ಸಮ್ಮತಿಯಿಂದಾಗಿ ಗ್ರಾಮಸ್ಥರು ಹನಿ ನೀರಿಗೂ ಪರದಾಡುವಂತಾಗಿದ್ದು, ವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮಸ್ಥರಿಗೆ ರೋಗಮುಕ್ತ ಹಾಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಸರ್ಕಾರ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಈ ಘಟಕವನ್ನು ಸ್ಥಾಪಿಸಿತ್ತು. ಆದರೆ, ಸಮರ್ಪಕ ನಿರ್ವಹಣೆಯ ಕೊರತೆಯಿಂದಾಗಿ ಮೂರು ವರ್ಷಗಳ ಹಿಂದೆಯೇ ಈ ಘಟಕ ಸ್ಥಗಿತಗೊಂಡಿದೆ. ಇಂದು ಈ ಘಟಕದ ಬಹುತೇಕ ಭಾಗಗಳು ತುಕ್ಕು ಹಿಡಿದು ಶಿಥಿಲಾವಸ್ಥೆಗೆ ತಲುಪುತ್ತಿವೆ. ಕಿಟಕಿ-ಬಾಗಿಲುಗಳು ತುಕ್ಕು ಹಿಡಿಯುತ್ತಿದ್ದು, ಅಕ್ಷರಶಃ ಇದೊಂದು ಪಾಳು ಬಿದ್ದ ಕಟ್ಟಡದಂತೆ ಭಾಸವಾಗುತ್ತಿದೆ.

ಪ್ರಸ್ತುತ ಸೂರ್ಯನ ತಾಪ ದಿನದಿಂದ ದಿನಕ್ಕೆ ಏರುತ್ತಿದೆ. ಬೇಸಿಗೆ ಬಿಸಿಲಿನಲ್ಲಿ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಮೈಲುಗಟ್ಟಲೆ ದೂರದಿಂದ ನೀರು ತರಬೇಕಾದ ಅನಿವಾರ್ಯತೆ ಎದುರಾಗಿದೆ. ಗ್ರಾಮದಲ್ಲಿನ ಬೋರ್ವೆಲ್ ನೀರು ಕುಡಿಯಲು ಯೋಗ್ಯವಲ್ಲದ ಕಾರಣ, ಶುದ್ಧ ನೀರಿಗಾಗಿ ನೆರೆಯ ಊರುಗಳನ್ನು ಅವಲಂಬಿಸುವುದು ಇಲ್ಲಿನ ನಿತ್ಯದ ಕಾಯಕವಾಗಿದೆ.

ಮನೆಯಲ್ಲಿ ಬೈಕ್ ಅಥವಾ ಸೈಕಲ್ ಇರುವವರು ದೂರದ ಊರುಗಳಿಗೆ ಹೋಗಿ ಕ್ಯಾನ್ಗಳಲ್ಲಿ ನೀರು ತುಂಬಿಸಿಕೊಂಡು ಬರುತ್ತಾರೆ. ಆದರೆ, ವಾಹನ ಸೌಲಭ್ಯವಿಲ್ಲದ ಬಡವರು, ವೃದ್ಧರು ನೀರಿಗಾಗಿ ಏನು ಮಾಡಬೇಕು? ಎಂಬ ಪ್ರಶ್ನೆ ಗ್ರಾಮಸ್ಥರನ್ನು ಕಾಡುತ್ತಿದೆ. ಕೂಲಿ ಕೆಲಸಕ್ಕೆ ಹೋಗುವವರು ಕೆಲಸ ಬಿಟ್ಟು ನೀರಿಗಾಗಿ ಅಲೆಯಬೇಕಾದ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ.

ಪಂಚಾಯಿತಿ ಮಟ್ಟದ ಅಧಿಕಾರಿಗಳಿಂದ ಹಿಡಿದು ತಾಲ್ಲೂಕು ಮಟ್ಟದ ಅಧಿಕಾರಿಗಳವರೆಗೆ ಎಲ್ಲರಿಗೂ ಈ ವಿಷಯ ತಿಳಿದಿದ್ದರೂ, ಘಟಕದ ದುರಸ್ತಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅನುದಾನದ ಕೊರತೆ ಅಥವಾ ತಾಂತ್ರಿಕ ದೋಷ ಎಂಬ ಸಬೂಬು ಹೇಳುತ್ತಾ ಕಾಲಹರಣ ಮಾಡಲಾಗುತ್ತಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ತಕ್ಷಣವೇ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿಗೊಳಿಸಿ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-16-2118095140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.