ಕೋಲಾರ: ‘ನಮ್ಮನ್ನು ಆಳುವ ಸರ್ಕಾರಗಳು ರೈತರು, ಕಾರ್ಮಿಕರು ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುವ ಶ್ರಮಜೀವಿಗಳ ಬದುಕಿನ ಜೊತೆ ಚೆಲ್ಲಾಟವಾಡುತ್ತಿವೆ. ಬಂಡವಾಳಗಾರರು ಮತ್ತು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿವೆ ಕೆಲಸ ಮಾಡುತ್ತಿವೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಎಚ್.ಎನ್ ಗೋಪಾಲಗೌಡ ವಾಗ್ದಾಳಿ ನಡೆಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶನಿವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸಂಘಟನೆಯ ಏಳನೇ ಜಿಲ್ಲಾ ಸಮ್ಮೇಳನದ ಬಹಿರಂಗ ಸಭೆಯನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಗಳು ಮಾಲೀಕನಿಗೆ ಅನುಕೂಲವಾಗುವಂತೆ ಕಾನೂನು ರೂಪಿಸಿ ಕಾರ್ಮಿಕರನ್ನು ಬೀದಿಗೆ ತಳ್ಳಿವೆ. ರಾಜಕೀಯ ವ್ಯವಸ್ಥೆ ಯಾವತ್ತೂ ಕಾರ್ಮಿಕರ ಪರ ನಿಲ್ಲುವುದಿಲ್ಲ. ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಒಂದಾಗುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ಕೊಡಬೇಕಾಗಿದೆ. ಕಾರ್ಮಿಕರು, ರೈತರು ಒಗ್ಗಟ್ಟು ಪ್ರದರ್ಶನದ ಮೂಲಕ ತಮ್ಮ ಹಕ್ಕನ್ನು ಪಡೆಯಬೇಕಾಗಿದೆ ಎಂದರು.

ಬಂಡವಾಳಶಾಹಿಗಳು ಕಾರ್ಮಿಕರ ಅವಶ್ಯವಿಲ್ಲವೆಂದು ನಿರಾಕರಿಸುತ್ತಿದ್ದು, ಸ್ವಯಂಘೋಷಿತ ಪ್ರಭುಗಳಾಗಲು ಹೊರಟಿದ್ದಾರೆ. ಕಾರ್ಮಿಕರ ಹೋರಾಟದ ಫಲವಾಗಿ ಗಳಿಸಿದ್ದ 29 ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಲು ಹೊರಟಿದ್ದಾರೆ. ಇದನ್ನು ವಿರೋಧಿಸಬೇಕಾಗಿದೆ ಹಾಗೂ ಕನಿಷ್ಠ ವೇತನ ₹ 36 ಸಾವಿರ ಜಾರಿಗೆ ಕಾರ್ಮಿಕರು ಒತ್ತಾಯ ಮಾಡಬೇಕಾಗಿದೆ ಎಂದು ಹೇಳಿದರು.

ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ‘ಕಾರ್ಮಿಕರ ಹೋರಾಟಗಳನ್ನು ಸರ್ಕಾರಗಳು ಸಹಿಸಿಕೊಳ್ಳುತ್ತಿಲ್ಲ. ಕಾರ್ಮಿಕ ಕಾಯ್ದೆಗಳು ಅಪಾಯಕಾರಿಯಾಗಿದ್ದು, ಬಂಡವಾಳಗಾರರಿಗೆ ಸರ್ಕಾರಗಳೇ ಮುಕ್ತ ಅವಕಾಶ ನೀಡಿವೆ. ಕಾರ್ಮಿಕರು ಆಧುನಿಕ ಜೀತದಾಳುಗಳಾಗಿ ದುಡಿಯಬೇಕಾಗಿದೆ, ಯುವ ಪೀಳಿಗೆಯ ಭವಿಷ್ಯವನ್ನು ಕಂಪನಿಗಳು ಆಳು ಮಾಡಲು ಹೊರಟಿವೆ, ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳಿಗೆ ಕಾರ್ಮಿಕರ ಪರ ಧ್ವನಿಯಿಲ್ಲ. ಒಗ್ಗಟ್ಟು ಒಂದೇ ದಾರಿಯಾಗಿದೆ’ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ.ವೆಂಕಟೇಶ್ ಮಾತನಾಡಿ, ‘ರೈತರು ಬೆಳೆದ ವಸ್ತುಗಳಿಗೆ ಸರಿಯಾದ ಬೆಂಬಲ ಬೆಲೆ, ಮಾರುಕಟ್ಟೆ ವ್ಯವಸ್ಥೆ ಇಲ್ಲ. ಕೈಗಾರಿಕೆಗಳು ಇಲ್ಲದೇ ಹಣ್ಣು, ತರಕಾರಿಗಳು ಕೊಳೆಯುವ ಸ್ಥಿತಿಗೆ ಬಂದಿವೆ. ಸರ್ಕಾರಗಳು ನಮ್ಮ ಬೇಡಿಕೆ ಕೇಳಿಸಿಕೊಳ್ಳದೆ ಜಾಣ ಕಿವುಡತನ ಪ್ರದರ್ಶಿಸುತ್ತಿವೆ’ ಎಂದು ಹೇಳಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ‘ದುಡಿಯುವ ಜನರಿಗೆ ಬದುಕಲು ಯೋಗ್ಯ ಕೂಲಿ, ವಸತಿ, ಪಿಂಚಣಿ ನೀಡಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರ ಕಾಯಂ ಮಾಡಬೇಕು. ಅಸಂಘಟಿತ ಕಾರ್ಮಿಕರ ಸಮಗ್ರ ಸಾಮಾಜಿಕ ಭದ್ರತೆ, ಬರಪೀಡಿತ-ಒಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಮಧುಗಿರಿ ಉಪ ವಿಭಾಗಕ್ಕೆ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಈ ಪ್ರದೇಶಗಳಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ದೊರಕಿಸುವಂತೆ ಈ ಸಮ್ಮೇಳನದಲ್ಲಿ ಚರ್ಚೆಯಾಗಬೇಕು’ ಎಂದರು.

ಇದಕ್ಕೂ ಮುಂಚೆ ನಗರದ ಪ್ರವಾಸಿ ಮಂದಿರದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಸಿಐಟಿಯು ಕಾರ್ಯಕರ್ತರು, ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ಮೆರವಣಿಗೆ ಮೂಲಕ ರಂಗಮಂದಿರಕ್ಕೆ ಬಂದರು.

ಬಹಿರಂಗ ಸಭೆಯ ವೇದಿಕೆಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಅಮರನಾರಾಯಣ, ಸ್ವಾಗತ ಸಮಿತಿ ಗೌರವಾಧ್ಯಕ್ಷ ಸಲ್ಲಾವುದ್ದೀನ್ ಬಾಬು, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ಖಜಾಂಚಿ ಎಚ್.ಬಿ ಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಆಂಜಲಮ್ಮ, ಮುಖಂಡರಾದ ಪಿ.ಶ್ರೀನಿವಾಸ್, ಪಿ.ಆರ್ ಸೂರ್ಯನಾರಾಯಣ, ಎ.ಆರ್ ಬಾಬು, ಪಾತಕೋಟೆ ನವೀನ್ ಕುಮಾರ್, ತಂಗರಾಜ್, ಜಯಲಕ್ಷ್ಮಿ, ಭೀಮರಾಜ್, ಶಿವಾನಂದ್, ವೀರಭದ್ರ, ತಿರುಪತಿ, ಆನಂದ್, ಕೇಶವರಾವ್ ಹಾಗೂ ಕಾರ್ಯಕರ್ತರು ಇದ್ದರು.

ಸರ್ಕಾರಗಳು ತಮ್ಮ ಕಾರ್ಯ ಯಶಸ್ವಿಗೊಳಿಸಲು ಕಾಯಂ ಹೊರಗುತ್ತಿಗೆ ನೌಕರರನ್ನು ಬಳಸಿಕೊಳ್ಳುತ್ತಿದ್ದು ಅವರ ಬದುಕಿನ ಸೇವಾ ಭದ್ರತೆಗೆ ಗಮನ ಹರಿಸದೆ ದುಡಿಸಿಕೊಳ್ಳುತ್ತಿವೆ
ಎಚ್.ಎನ್ ಗೋಪಾಲಗೌಡ ಸಿಐಟಿಯು ರಾಜ್ಯ ಉಪಾಧ್ಯಕ್ಷ

ಕಾರ್ಮಿಕರು ರೈತರು ಒಗ್ಗಟ್ಟು ಪ್ರದರ್ಶಿಸಿ ತಮ್ಮ ಹಕ್ಕು ಪಡೆದುಕೊಳ್ಳಬೇಕಿದೆ. ದೆಹಲಿ ಮತ್ತು ದೇವನಹಳ್ಳಿಯ ರೈತ ಹೋರಾಟಗಳು ನಮಗೆಲ್ಲ ಮಾದರಿಯಾಗಬೇಕು
ಟಿ.ಎಂ.ವೆಂಕಟೇಶ್ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.