ಕೋಲಾರ: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ನೀಡುವ ‘ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ’ಗೆ ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ ಹಾಗೂ ಪತ್ರಕರ್ತ ಸಿ.ಎಂ.ಮುನಿಯಪ್ಪ ಭಾಜನರಾಗಿದ್ದಾರೆ.

ಪ್ರಶಸ್ತಿಯು ₹5 ಲಕ್ಷ ನಗದು, 20 ಗ್ರಾಂ ಚಿನ್ನ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಅಂಬೇಡ್ಕರ್ ಜಯಂತಿ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಏ.14ರಂದು ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

‘ನಾನು ದಲಿತ ಸಮುದಾಯದ ಎಲ್ಲರ ಸಂಗಡದಲ್ಲಿ ನಾಯಕನಾಗಿ ಹೊರಹೊಮ್ಮಿದವನು. ದಬ್ಬಾಳಿಕೆ, ಅಸ್ಪೃಶ್ಯತೆ, ದೌರ್ಜನ್ಯದಿಂದ ನಮ್ಮ ಬಿಡುಗಡೆಗಾಗಿ ಹೋರಾಟ ನಡೆಸಿದವನು. ನಮ್ಮ ಸಮುದಾಯದ ಏಳಿಗೆಗೆ ಹೋರಾಟ ನಡೆಸಿದವನು. ಪ್ರಶಸ್ತಿ ಬಂದಿರುವುದು ಸಹಜವಾಗಿಯೇ ಖುಷಿ ತಂದಿದೆ’ ಎಂದು ಸಿ.ಎಂ.ಮುನಿಯಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ನನ್ನ ಆತ್ಮಚರಿತ್ರೆ ಹಾಗೂ ದಲಿತ ಚಳವಳಿ ಚರಿತ್ರೆಯ ಕೃತಿ ‘ಕಾಲಡಿಯ ಕಣ್ಣು’ ಮೇ 9ಕ್ಕೆ ಬಿಡುಗಡೆ ಆಗಲಿದೆ. ಅದರಲ್ಲಿ ಹೋರಾಟದ ಇಂಚಿಂಚು ಮಾಹಿತಿಯನ್ನೂ ದಾಖಲಿಸಿದ್ದೇನೆ ಎಂದರು.

ಕೋಲಾರ ತಾಲ್ಲೂಕಿನ ಚಿಕ್ಕಹಸಾಳ ಗ್ರಾಮದ ದೊಡ್ಡಮುನಿಸ್ವಾಮಿ ಹಾಗೂ ಹನುಮಕ್ಕ ದಂಪತಿ ಪುತ್ರ ಮುನಿಯಪ್ಪ, ತಮ್ಮ 66 ವರ್ಷಗಳ ಜೀವನದಲ್ಲಿ 50 ವರ್ಷಗಳನ್ನು ಹೋರಾಟಕ್ಕಾಗಿಯೇ ಶ್ರಮಿಸಿದ್ದಾರೆ. ರಾಜ್ಯದ್ಯಂತ ದಲಿತ ಚಳವಳಿಯ ಹಿರಿಯ ಹಾಗೂ ಪ್ರಮುಖ ಮುಖಂಡ ಎನಿಸಿಕೊಂಡಿದ್ದಾರೆ. ಕೋಲಾರದ ನಚಿಕೇತ ನಿಲಯದಲ್ಲಿದ್ದು ಬಿ.ಎ ವ್ಯಾಸಂಗ ಮಾಡಿದ್ದಾರೆ.

ದಲಿತ ಹೋರಾಟಗಾರರಲ್ಲದೇ; ಪತ್ರಕರ್ತರಾಗಿ, ‘ಸಂಚಿಕೆ’ ಪತ್ರಿಕೆ ಆರಂಭಿಸಿದ ಸಂಪಾದಕರಾಗಿ, ಬರಹಗಾರರಾಗಿ ಗುರುತಿಸಿಕೊಂಡಿರುವ ಅವರು ಕೃಷಿ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.

ಐದು ದಶಕಗಳ ದಲಿತ ಚಳವಳಿಯ ಬದುಕಿನಲ್ಲಿ ನಾಲ್ಕು ದಶಕಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಡಿಎಸ್ಎಸ್) ಜಿಲ್ಲಾ ಸಂಚಾಲಕರಾಗಿ, ರಾಜ್ಯ ಸಂಚಾಲಕರಾಗಿ ಮತ್ತು ರಾಜ್ಯ ಸಮಿತಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ.

ಅವಿಭಜಿತ ಕೋಲಾರ ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಯ ಪ್ರಮುಖ ದಲಿತ ಹೋರಾಟಗಳಲ್ಲಿ, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ, ಕೊಲೆ, ಅತ್ಯಾಚಾರದಂಥ ಕೃತ್ಯಗಳ ವಿರುದ್ಧ ಸಮುದಾಯವನ್ನು ಸಂಘಟಿಸಿದ್ದಾರೆ. ದಲಿತ ವಲಯದಲ್ಲಿ ಎಚ್ಚರ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ದಲಿತರ ಶೈಕ್ಷಣಿಕ ಉನ್ನತಿ, ಸರ್ಕಾರಿ ಸವಲತ್ತುಗಳನ್ನು ಸಮುದಾಯಕ್ಕೆ ತಲುಪಿಸುವ ಕೆಲಸ ಮಾಡಿದ್ದಾರೆ. ದಲಿತ ಸಮುದಾಯದ ಸ್ವಾವಲಂಬಿ ಹಾಗೂ ಆತ್ಮಗೌರವ ಬದುಕಿಗಾಗಿ ವೈಯಕ್ತಿಕ ಬದುಕನ್ನು ಮುಡಿಪಾಗಿಟ್ಟು ಶ್ರಮಿಸಿದ್ದಾರೆ.

ಮುನಿಯಪ್ಪ ಅವರ ಹೋರಾಟ ಜೀವನ, ಸಮಾಜ ಸೇವೆಗಾಗಿ ಅನೇಕ ಪ್ರಶಸ್ತಿಗಳು ಒಲಿದಿವೆ. 2015ರಲ್ಲಿ ಮಾನವ ಬಂಧುತ್ವ ವೇದಿಕೆಯ ಬಿ.ಕೃಷ್ಣಪ್ಪ ಪ್ರಶಸ್ತಿ, 2015 ರಲ್ಲಿ ಪತ್ರಿಕಾ ರಂಗದ ಸೇವೆಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ, 2016 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಮುಖವಾಗಿವೆ. 2023ರಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಸ್ಪೀಕರಿಸಿದ್ದರು.

ತಮ್ಮ ಹೋರಾಟದ ಬದುಕನ್ನು ದಲಿತ ಚಳವಳಿಯ ಇತಿಹಾಸದ ದಾಖಲೆಯನ್ನಾಗಿಸುವ ಪ್ರಯತ್ನದ ಭಾಗವಾಗಿ ‘ಕಾಲಡಿಯ ಕಣ್ಣು’ ಎಂಬ ಹೆಸರಿನಡಿ ಆತ್ಮಕಥೆ ಬರೆದಿದ್ದಾರೆ. ಅಂಬೇಡ್ಕರ್ ಆಶಯಗಳ ಹಾದಿಯಲ್ಲಿಯೇ ಹೋರಾಟವನ್ನೇ ಬದುಕಾಗಿಸಿಕೊಂಡಿರುವ ಸಿ.ಎಂ.ಮುನಿಯಪ್ಪ ಅವರಿಗೆ ರಾಜ್ಯ ಸರ್ಕಾರ ಅಂಬೇಡ್ಕರ್ ಪ್ರಶಸ್ತಿ ನೀಡುತ್ತಿರುವುದು ದಲಿತ ಚಳವಳಿಯನ್ನೇ ಗೌರವಿಸಿದಂತಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-18-641038317

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.