ಕೋಲಾರ: ಕೋಲಾರ ತಾಲ್ಲೂಕಿನ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಮೈಲಾಂಡಹಳ್ಳಿ ಮುರಳಿ ಹಾಗೂ ನಗರ ಬ್ಲಾಕ್ ಅಧ್ಯಕ್ಷರಾಗಿ ನಗರಸಭೆ ಸದಸ್ಯ ಸೈಯದ್ ಅಪ್ಸರ್ ಅವರನ್ನು ನೇಮಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ನೇಮಕ ಮಾಡಿಸಿ ಆದೇಶ ಹೊರಡಿಸಿದ್ದಾರೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಗೆ ಮಣೆ ಹಾಕಿರುವುದು ಸ್ಪಷ್ಟವಾಗಿದೆ.

ಈ ಮೊದಲು ಸಚಿವ ಕೆ.ಎಚ್.ಮುನಿಯಪ್ಪ ಬೆಂಬಲಿಗರಾದ ಉದಯಶಂಕರ್ ಗ್ರಾಮಾಂತರ ಬ್ಲಾಕ್ ಹಾಗೂ ಪ್ರಸಾದ್ ಬಾಬು ನಗರ ಬ್ಲಾಕ್ ಅಧ್ಯಕ್ಷರಾಗಿದ್ದರು. ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸಿದ್ದ ಅವರನ್ನು ಕೈಬಿಡಲಾಗಿದೆ.

ತಾಲ್ಲೂಕಿನ ಮೈಲಾಂಡಹಳ್ಳಿ ಗ್ರಾಮದ ಮುರಳಿ ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ನಗರ ಬ್ಲಾಕ್ ಅಧ್ಯಕ್ಷರಾಗಿ ರೆಹಮತ್ ನಗರದ ಸೈಯದ್ ಅಪ್ಸರ್ ಮೂರು ಬಾರಿ ನಗರಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.

ತಕ್ಷಣ ಕೋಲಾರ ಗ್ರಾಮಾಂತರ ಮತ್ತು ನಗರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.