ಕೋಲಾರ: ಹಾಲು ಒಕ್ಕೂಟದ ವಿಚಾರದಲ್ಲಿ ಕಿತ್ತಾಟ, ಜಿಲ್ಲಾ ಉಸ್ತುವಾರಿ ಸಚಿವರಿಂದ ಕಡೆಗಣನೆ ಹಾಗೂ ಅನುದಾನದಲ್ಲಿ ತಾರತಮ್ಯ ಎಂದು ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದ ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮಂತ್ರಿಗಿರಿ ವಿಚಾರದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುತ್ತಾ ದೆಹಲಿ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ.

ಕಾಂಗ್ರೆಸ್ ಶಾಸಕರಾದ ಬಂಗಾರಪೇಟೆಯ ಎಸ್.ಎನ್.ನಾರಾಯಣಸ್ವಾಮಿ, ಮಾಲೂರಿನ ಕೆ.ವೈ.ನಂಜೇಗೌಡ, ಕೋಲಾರದ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹ್ಮದ್, ಎಂ.ಎಲ್.ಅನಿಲ್ ಕುಮಾರ್ ಹಾಗೂ ಮುಖಂಡರು ಸಹಿ ಹಾಕಿ ಹೈಕಮಾಂಡ್ಗೆ ಹಕ್ಕೊತ್ತಾಯ ಮಂಡಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಹೊಸ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಅವಕಾಶ ನೀಡಲೇಬೇಕೆಂದು ಬೇಡಿಕೆ ಇಟ್ಟಿದ್ದಾರೆ. ವಿಶೇಷವೆಂದರೆ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಮಾತ್ರ ಈ ಗುಂಪಿನಲ್ಲಿ ಕಾಣಿಸಿಕೊಳ್ಳದೆ ತಮ್ಮ ಕ್ಷೇತ್ರದಲ್ಲೇ ಉಳಿದಿದ್ದಾರೆ. ಪತ್ರಕ್ಕೆ ಸಹಿ ಹಾಕಿರುವ ನಸೀರ್ ಹಾಗೂ ಕೊತ್ತೂರು ಮಂಜುನಾಥ್ ಮನವಿ ಪತ್ರ ನೀಡುವ ಸಂದರ್ಭದಲ್ಲಿ ದೆಹಲಿಯಲ್ಲಿ ಇರಲಿಲ್ಲ.

ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಎಸ್.ಎನ್.ನಾರಾಯಣಸ್ವಾಮಿ ಬಂಗಾರಪೇಟೆ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ್ದು, ಅವರನ್ನು ರಾಜ್ಯ ಸಚಿವ ಸಂಪುಟ ಪುನರ್ ರಚನೆ ವೇಳೆ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಬಲಗೈ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಟಿ.ಚನ್ನಯ್ಯ ಬಳಿಕ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲವೆಂದು ಗಮನಕ್ಕೆ ತಂದಿದ್ದಾರೆ.

ಇಡೀ ದೇಶದಲ್ಲಿ ಅಲೆಮಾರಿ ಸಮುದಾಯದ ಏಕೈಕ ಶಾಸಕ ಎಂದು ಕೊತ್ತೂರು ಮಂಜುನಾಥ್ ಸಚಿವ ಸ್ಥಾನಕ್ಕಾಗಿ ಹಕ್ಕೊತ್ತಾಯ ಮಂಡಿಸಿದ್ದಾರೆ. ಮಾಲೂರು ಕ್ಷೇತ್ರದಲ್ಲಿ ಸತತ ಎರಡು ಬಾರಿ ಗೆದ್ದು, ಈ ಭಾಗದಲ್ಲಿ ಒಕ್ಕಲಿಗ ಸಮುದಾಯದ ಸಂಘಟನೆಯಲ್ಲಿ ತೊಡಗಿರುವ ತಮ್ಮನ್ನು ಮಂತ್ರಿ ಸ್ಥಾನಕ್ಕೆ ಪರಿಗಣಿಸಬೇಕೆಂದು ನಂಜೇಗೌಡ ಮನವಿ ಮಾಡಿದ್ದಾರೆ. ಆದರೆ, ಇಂಗ್ಲಿಷ್ನಲ್ಲಿ ಬರೆದು ಸಲ್ಲಿಸಿರುವ ಈ ಮನವಿ ಪತ್ರದಲ್ಲಿ ರೂಪಕಲಾ ಹೆಸರು ಪ್ರಸ್ತಾಪವೇ ಆಗಿಲ್ಲ.

ನವದೆಹಲಿಯಲ್ಲಿ ಶುಕ್ರವಾರ ನಂಜೇಗೌಡ, ಅನಿಲ್, ನಾರಾಯಣಸ್ವಾಮಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಕೂಡ ಕಾಣಿಸಿಕೊಂಡರು.

ಈ ಮಧ್ಯೆ, ಜಿಲ್ಲೆಯ ಕಾಂಗ್ರೆಸ್ನ ನಾಲ್ವರು ಶಾಸಕರಲ್ಲಿ ಎಸ್.ಎನ್.ನಾರಾಯಣಸ್ವಾಮಿ ಹಾಗೂ ರೂಪಕಲಾ ಶಶಿಧರ್ ಹೆಸರು ಸಚಿವ ಸ್ಥಾನಕ್ಕೆ ಮುಂಚೂಣಿಯಲ್ಲಿರುವುದು ಗೊತ್ತಾಗಿದೆ.

ಭಿನ್ನಾಭಿಪ್ರಾಯ ಶಮನವಾಯಿತೇ?: ಕೋಮುಲ್ ಚುನಾವಣೆ ವಿಚಾರವಾಗಿ ಎಸ್.ಎನ್.ನಾರಾಯಣಸ್ವಾಮಿ ಹಾಗೂ ನಂಜೇಗೌಡರ ನಡುವೆ ಭಿನ್ನಾಭಿಪ್ರಾಯ ಶುರುವಾಗಿತ್ತು. ಆಗಿನಿಂದ ಪರಸ್ಪರ ವಾಗ್ದಾಳಿಯಲ್ಲಿ ತೊಡಗಿದ್ದರು. ನಂಜೇಗೌಡರ ಜೊತೆ ಗುರುತಿಸಿಕೊಂಡಿದ್ದ ಕೊತ್ತೂರು ಮಂಜುನಾಥ್ ಹಾಗೂ ಅನಿಲ್ ಕುಮಾರ್ ಕೂಡ ನಾರಾಯಣಸ್ವಾಮಿ ಅವರಿಂದ ದೂರವೇ ಉಳಿದಿದ್ದರು. ಯಾವುದೇ ವಿಚಾರಕ್ಕೆ ತಮ್ಮನ್ನು ಪರಿಗಣಿಸುತ್ತಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ವಿರುದ್ಧವೂ ಬಂಗಾರಪೇಟೆ ಶಾಸಕರು ಮುನಿಸಿಕೊಂಡಿದ್ದರು.

ಈಗ ನಾರಾಯಣಸ್ವಾಮಿ ಹಾಗೂ ನಂಜೇಗೌಡ ಜೊತೆಯಲ್ಲಿ ಕಾಣಿಸಿಕೊಂಡು, ಒಂದೇ ವಾಹನದಲ್ಲಿ ತಿರುಗಾಡುತ್ತಾ ಹಿಂದಿನ ವೈಮನಸ್ಯಕ್ಕೆ ತೆರೆ ಎಳೆದಂತಿದೆ. ಅದು ತಾತ್ಕಾಲಿಕವೇ ಇಲ್ಲವೇ ಮುಂದೆಯೂ ಈ ಆತ್ಮೀಯತೆ ಇರುವುದೇ ಎಂಬ ಕುತೂಹಲ ಕ್ಷೇತ್ರದ ಜನರಿಗೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-18-1217099176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.