ಕೋಲಾರ: ಮಹಿಳೆಯರಿಗೆ ಶೇ 33 ರಾಜಕೀಯ ಮೀಸಲಾತಿ ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಮೈತ್ರಿಕೂಟ ಬೆಂಬಲ ನೀಡಿಲ್ಲ. ಲೋಕಸಭೆಯಲ್ಲಿ ಮಸೂದೆ ಸೋಲಿಗೆ ಕಾರಣವಾದ ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಆಗಿದ್ದು, ಅವರನ್ನು ಯಾವ ಮಹಿಳೆಯೂ ಕ್ಷಮಿಸಲ್ಲ ಎಂದು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ವಾಗ್ದಾಳಿ ನಡೆಸಿದರು.

ನಗರ ಹೊರವಲಯದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗಾಗಲಿ, ಬೇರೆ ರಾಜ್ಯಗಳಾಗಲಿ ತೊಂದರೆ ಆಗುವುದಿಲ್ಲ. ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಆರೋಪದಲ್ಲಿ ವಾಸ್ತವಾಂಶ ಇಲ್ಲ. ಎಲ್ಲಾ ರಾಜ್ಯಗಳಲ್ಲಿನ ಕ್ಷೇತ್ರಗಳ ಸಂಖ್ಯೆ ಶೇ 50ರಷ್ಟು ಹೆಚ್ಚಳವಾಗಲಿದೆ. ಕರ್ನಾಟಕದ ಲೋಕಸಭೆ ಕ್ಷೇತ್ರಗಳ ಸಂಖ್ಯೆ 28ರಿಂದ 42ಕ್ಕೇರಲಿದೆ’ ಎಂದರು.

ಈ ಹಿಂದೆ ಹಲವು ಬಾರಿ ಮಹಿಳಾ ಮೀಸಲಾತಿ ಜಾರಿಗೆ ಮುಂದಾದಾಗ ಒಪ್ಪಿಗೆ ಸಿಕ್ಕಿರಲಿಲ್ಲ. ದೇಶದಲ್ಲಿ ಶೇ 50ರಷ್ಟು ಮಹಿಳೆಯರು ಇದ್ದರೂ ಮೀಸಲಾತಿಗಾಗಿ ಬೇಡುವ ಪರಿಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಬಾರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಮಸೂದೆ ಜಾರಿ ಆಗುವ ಬಲವಾದ ಭರವಸೆಯನ್ನು ದೇಶದ ಮಹಿಳೆಯರು ಹೊಂದಿದ್ದರು. ಆದರೆ, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರೋಧದಿಂದಾಗಿ ಮೂರನೇ ಎರಡರಷ್ಟು ಬಹುಮತ ಸಿಗದೆ ಮಹಿಳೆಯರ ಕನಸು ನುಚ್ಚು ನೂರಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರ ಬಗ್ಗೆ ಕಾಳಜಿಯೇ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಬ್ಬ ಮಹಿಳೆಯಾಗಿ ಪ್ರಿಯಾಂಕಾ ಗಾಂಧಿ ಅವರು ಹೆಣ್ಣು ಮಕ್ಕಳ ಭಾವನೆಗಳನ್ನು ಅರ್ಥ ಮಾಡಿಕೊಂಡಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ಷೇತ್ರ ಪುನರ್ ವಿಂಗಡಣೆ ಮಾಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಾಡಿದರು. ಕಾಂಗ್ರೆಸ್ನವರು ಕ್ಷೇತ್ರ ವಿಂಗಡಣೆ ಮಾಡಬಹುದು, ಮೋದಿ ಮಾಡಿದರೆ ತಪ್ಪು. ಇದೆಂಥಾ ನ್ಯಾಯ ಎಂದು ಪ್ರಶ್ನಿಸಿದರು.

ನಿದ್ದೆ ಮಾಡುವವರನ್ನು ಎಬ್ಬಿಸಬಹುದು ಆದರೆ ನಿದ್ರೆ ಮಾಡುವವರಂತೆ ನಟಿಸುವವರನ್ನು ಎಬ್ಬಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಜೊತೆಗೆ ವಿಪಕ್ಷಗಳು ಕೂಡ ನಿದ್ರೆಯ ನಟನೆಯಲ್ಲಿ ತೊಡಗಿಸಿಕೊಂಡಿವೆ ಎಂದು ಲೇವಡಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್, ಮಾಧ್ಯಮ ಪ್ರಮುಖ್ ಪ್ರವೀಣಗೌಡ, ಸಹ ಪ್ರಮುಖ್ ಕೆಂಬೋಡಿ ನಾರಾಯಣಸ್ವಾಮಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅರುಣಮ್ಮ, ಮುಖಂಡರಾದ ಮಮತಮ್ಮ, ಅಪ್ಪಿರಾಜು, ಸುಗಟೂರು ಚಂದ್ರಶೇಖರ್. ಸಿ.ಡಿ.ರಾಮಚಂದ್ರ, ಸಾ.ಮ.ಬಾಬು. ರಾಜೇಶ್ ಸಿಂಗ್, ತಿಮ್ಮರಾಯಪ್ಪ, ಕಿರಣ್, ಶ್ರೀಧರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-18-307905768

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.