ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ: ನೇಣು ಹಾಕಿಕೊಂಡು ದಂಪತಿ ಆತ್ಮಹತ್ಯೆ

Published 11 ಜುಲೈ 2024, 6:27 IST
Last Updated 11 ಜುಲೈ 2024, 6:27 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿನ ವೇಮಗಲ್ ಹೋಬಳಿಯ ಮಂಜಲಿ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಮರಕ್ಕೆ ನೇಣು ಹಾಕಿಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಜಲಿ ಗ್ರಾಮದ ಆಟೊ ಚಾಲಕ ಲಕ್ಷ್ಮಣ (38) ಹಾಗೂ ಅವರ ಪತ್ನಿ ಮಾಲಾಶ್ರೀ (35) ಆತ್ಮಹತ್ಯೆ ಮಾಡಿಕೊಂಡವರು.

ಮಾಲಾಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ದಾಸೋಹ ಸಹಾಯಕಿಯಾಗಿ ಕೆಲಸ ‌ಮಾಡುತ್ತಿದ್ದರು.

ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗು ಇದೆ.

ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT