ಕೋಲಾರ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಮಾವು ಮತ್ತು ತರಕಾರಿ ಬೆಳೆ ನಾಶವಾಗಿದ್ದು, ಕೂಡಲೇ ಜಿಲ್ಲಾಡಳಿತ ಮತ್ತು ತೋಟಗಾರಿಕೆ ಇಲಾಖೆ ಬೆಳೆ ಸರ್ವೆ ಕಾರ್ಯ ನಡೆಸಿ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾ ಅಧ್ಯಕ್ಷ ಸೀತಿಹೊಸೂರು ಮುರಳಿಗೌಡ ಆಗ್ರಹಿಸಿದ್ದಾರೆ.

ಕೆಲವು ದಿನಗಳ ಹಿಂದೆ ಜಿಲ್ಲೆಯ ಶ್ರೀನಿವಾಸಪುರ, ಕೆಜಿಎಫ್, ಮುಳಬಾಗಿಲು ಸೇರಿದಂತೆ ಇತರೆ ಭಾಗದಲ್ಲಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಮಾವು ಮತ್ತು ತರಕಾರಿ ಬೆಳೆಗಳು ಅಕಾಲಿಕ ಆಲಿಕಲ್ಲು ಮಳೆಗೆ ನೆಲಕ್ಕಚ್ಚಿವೆ. ಬೆಳೆ ಹಾನಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಬಿಸಿಲಿನ ಧಗೆಯಿಂದ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಮಾವಿನ ಇಳುವರಿಯಲ್ಲಿ ತೀವ್ರ ಕುಸಿತ ಉಂಟಾಗಿದೆ. ಉಷ್ಣಾಂಶ ಏರಿಕೆ, ಕೂಲಿ, ರಸಗೊಬ್ಬರ ದರ, ನಿರ್ವಹಣೆ ವೆಚ್ಚ ಹೆಚ್ಚಳದಿಂದ ನೊಂದಿರುವ ಮಾವು ಬೆಳೆಗಾರರಿಗೆ ಅಕಾಲಿಕ ಮಳೆಯೂ ದೊಡ್ಡ ಹೊಡೆತ ನೀಡಿದೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಶಿಫಾರಸಿನ ಮೇರೆಗೆ ತೋಟಗಾರಿಕೆ ಇಲಾಖೆಯು ನಷ್ಟದ ಅಂದಾಜು ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ವ್ಯವಸಾಯ ಮಾಡುವುದೇ ದುಸ್ತರವಾಗಿದೆ. ಹಲವು ರೈತರು ಸಾಲ ಮಾಡಿ ಬೆಳೆಗಳನ್ನು ಬೆಳೆದಿದ್ದು, ಉತ್ತಮ ಫಸಲು ಬಂದಿತ್ತು. ನಷ್ಟದ ಕುರಿತು ಸೂಕ್ತ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಪರಿಹಾರ ಬಿಡುಗಡೆ ಮಾಡಿ ರೈತರ ಕೈಹಿಡಿಯುವ ಕೆಲಸ ಮಾಡಬೇಕು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-18-1497874843

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.