ಕೋಲಾರ: ನಗರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಮಂಗಳವಾರ ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘ, ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್.ರವಿ, ‘ದಲಿತರು ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಸೀಮಿತಗೊಳ್ಳದೆ ಉದ್ಯಮಿಯಾಗಿ ನೂರಾರು ಜನಕ್ಕೆ ಉದ್ಯೋಗ ನೀಡುವಷ್ಟು ಮಟ್ಟಿಗೆ ಬೆಳೆಯಬೇಕು’ ಎಂದರು.

ದಲಿತರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮಪತಿಗಳಾಗಿ ಉದ್ಯೋಗ ಕೊಟ್ಟಾಗ ಮಾತ್ರವೇ ಅಂಬೇಡ್ಕರ್ ಅವರ ಆಶಯಗಳಿಗೆ ಬೆಲೆ ಕೊಟ್ಟಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘ ಅಧ್ಯಕ್ಷ ಮಾರ್ಜೇನಹಳ್ಳಿ ಬಾಬು ಮಾತನಾಡಿ, ‘ಅಂಬೇಡ್ಕರ್ ಜಯಂತಿಯನ್ನು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದೆ. ಅವರ ಅಶಯಗಳೇ ನಮಗೆ ಮಾರ್ಗದರ್ಶನ. ಅವರು ಕೊಟ್ಟ ಭಿಕ್ಷೆಯಲ್ಲಿ ಬದುಕುತ್ತಿದ್ದೇವೆ’ ಎಂದರು.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಾಮಮೂರ್ತಿ, ಕುಡಿಯುವ ನೀರು ಇಲಾಖೆಯ ಎಂ.ರಘು, ಸಣ್ಣ ನೀರಾವರಿ ಇಲಾಖೆಯ ವೆಂಕಟರಮಣ, ನಗರಾಭಿವೃದ್ಧಿ ಇಲಾಖೆಯ ಗಂಗಾಧರ, ಮುಖಂಡರಾದ ವಕ್ಕಲೇರಿ ರಾಜಪ್ಪ, ವರದೇನಹಳ್ಳಿ ವೆಂಕಟೇಶ್, ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ಅಧ್ಯಕ್ಷ ಅಮ್ಮೇರಹಳ್ಳಿ ಚಲಪತಿ, ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಯರಾಮ್, ಕಿರಣ್ ರಾಜಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-18-658757154

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.