ಕೋಲಾರ: ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡಿರುವ ರೈತರಿಗೆ ಯಾವುದೇ ಷರತ್ತು ಇಲ್ಲದೆ ಕೃಷಿ ಸಾಲ ವಿತರಣೆ ಮಾಡಬೇಕು, ಬ್ಯಾಂಕ್ನಲ್ಲಿ ನಡೆದಿರುವ ಹಗರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರೈತ ಸಂಘದವರು ನಗರದ ಡಿಸಿಸಿ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದರು.

ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಲೂಟಿ ಮಾಡಲು ರೈತರು, ಮಹಿಳೆಯರು, ಕೂಲಿ ಕಾರ್ಮಿಕರಿಗೆ ಸ್ವಾಭಿಮಾನದ ಬದುಕು ನೀಡಿರುವ ಡಿಸಿಸಿ ಬ್ಯಾಂಕ್ ಬೇಕೇ? ಬ್ಯಾಂಕ್ಗ ಬೀಗ ಹಾಕುವ ಕಾಲ ದೂರ ಇಲ್ಲ, ಬ್ಯಾಂಕ್ ಮುಳುಗಡೆಯಾಗುತ್ತಿದ್ದರೂ ಜನಪ್ರತಿನಿಧಿಗಳು ಏಕೆ ಧ್ವನಿ ಎತ್ತುತಿಲ್ಲ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ ನಾರಾಯಣಗೌಡ ಪ್ರಶ್ನಿಸಿದರು.

ಪಡೆದು ಸಾಲವನ್ನು ಮರುಪಾವತಿ ಮಾಡದ ಮಾಜಿ ಶಾಸಕರಿಗೆ ಸಾಲ ಮುಕ್ತಿವಾಗಿದೆಯೆಂದು ಎನ್ಓಸಿ ನೀಡಿರುವ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಎಲ್ಲಾ ರೈತರಿಗೂ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೂ ಬ್ಯಾಂಕ್ನಿಂದ ಎನ್ಓಸಿ ನೀಡಿ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-18-221290987

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.