ಕೋಲಾರ: ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ 16ನೇ ವಾರ್ಷಿಕ ಘಟಿಕೋತ್ಸವ ಸೋಮವಾರ ನಡೆಯಲಿದ್ದು, ವಿವಿಧ ವಿಭಾಗಗಳಲ್ಲಿ ಒಟ್ಟು 469 ವಿದ್ಯಾರ್ಥಿಗಳಿಗೆ ಪದವಿ ಹಾಗೂ 22 ಮಂದಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತದೆ.

ನಗರ ಹೊರವಲಯದ ಟಮಕದಲ್ಲಿರುವ ಸಂಸ್ಥೆಯ ಆರ್.ಎಲ್.ಜಾಲಪ್ಪ ರಜತ ಮಹೋತ್ಸವ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರಿನ ಐಐಎಸ್ಸಿಯಲ್ಲಿ ಪ್ರಾಧ್ಯಾಪಕರಾಗಿದ್ದ ಕೆ.ಪಿ.ಜೆ.ರೆಡ್ಡಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಕುಲಾಧಿಪತಿ ಜಿ.ಎಚ್.ನಾಗರಾಜ ಪದವಿ ಪ್ರದಾನ ಮಾಡಲಿದ್ದಾರೆ. ಕುಲಪತಿ ಪ್ರೊ.ಬಿ.ವೆಂಗಮ್ಮ ವರದಿ ವಾಚನ ಮಾಡಲಿದ್ದಾರೆ.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ನಿವೃತ್ತ ಐಎಎಸ್ ಅಧಿಕಾರಿ ಎಸ್.ಎನ್.ಜಯರಾಮ್ ಅವರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಲಾಗುತ್ತದೆ. ಡಾ.ಭವಿಕಾ ಕೆ. (ಎಂಬಿಬಿಎಸ್) ನಾಲ್ಕು ಚಿನ್ನದ ಪದಕಗಳಿಗೆ ಭಾಜನರಾಗಿದ್ದಾರೆ.

ವಿಶ್ವವಿದ್ಯಾಲಯ ಹೊಸ ಕಟ್ಟಡ ಹಾಗೂ ಲಿನಿಯರ್ ಅಕ್ಸಿಲರೇಟರ್ ಕ್ಯಾನ್ಸರ್ ಉಪಕರಣದ ಲೋಕಾರ್ಪಣೆ ಕಾರ್ಯಕ್ರಮವೂ ಇದೇ ಸಂದರ್ಭದಲ್ಲಿ ನಡೆಯಲಿದೆ.

ಶ್ರೀ ದೇವರಾಜ ಅರಸು ಎಜುಕೇಷನಲ್ ಟ್ರಸ್ಟ್ ಉಪಾಧ್ಯಕ್ಷ ಜೆ.ರಾಜೇಂದ್ರ, ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಸಲಹೆಗಾರ ಡಾ.ಜಿ.ವಿ.ಮಂಜುನಾಥ್, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ.ಡಿ.ವಿ.ಎಲ್.ಎನ್.ಪ್ರಸಾದ್, ಸಂಸ್ಥೆ ಕುಲಸಚಿವ ಡಾ.ಮುನಿನಾರಾಯಣ ಸಿ.,ಸಂಸ್ಥೆ ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಶಶಿಧರ್ ಕೆ., ಡೀನ್ ಫ್ಯಾಕಲ್ಟಿ ಆಫ್ ಮೆಡಿಸನ್ ಹಾಗೂ ಪ್ರಾಂಶುಪಾಲ ಡಾ.ಪ್ರಭಾಕರ್ ಕೆ., ಜಾಲಪ್ಪ ಆಸ್ಪತ್ರೆ ವೈದ್ಯಕೀಯ ಉಪ ಅಧೀಕ್ಷಕ ಡಾ.ದಿನೇಶ್ ಪಾಲ್ಗೊಳ್ಳಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-667220454

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.