ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಧನ
ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಸರ್ಕಾರ ಮತ್ತು ಅಜೀಂ ಪ್ರೇಮ್‍ಜಿ ಫೌಂಡೇಶನ್ ಸಹಕಾರದೊಂದಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಉತ್ತೀರ್ಣರಾಗುವ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷವೂ ₹30 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತದೆ. ರಾಜ್ಯದಲ್ಲಿ ಈಗಾಗಲೇ 37 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ವಿದೇಶಿ ವ್ಯಾಸಂಗಕ್ಕೆ ಬೆಂಬಲ: ಪ್ರತಿ ವರ್ಷ 5 ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲು ಯೋಜಿಸಲಾಗುತ್ತಿದೆ. ಕಾಲೇಜುಗಳ ಜೊತೆಗೆ ಜಿಲ್ಲೆಯ ಇತರೆ ಮೂಲಸೌಕರ್ಯಗಳಿಗೂ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.