ಕೋಲಾರ: ನಗರದ ವಿವಿಧೆಡೆ ಬೀದಿ ವ್ಯಾಪಾರಿಗಳು ಮತ್ತು ಸಂಚಾರಿ ವ್ಯಾಪಾರಿಗಳನ್ನು ಒಂದೇ ಸೂರಿನಡಿ ತರಲು ಪ್ರಯತ್ನವಾಗಿ ಟಿ.ಚನ್ನಯ್ಯ ಸಂತೆ ಮೈದಾನ ಹಾಗೂ ಪ್ರಭಾತ್ ಟಾಕೀಸ್ ರಸ್ತೆ ಪಕ್ಕದಲ್ಲಿ ಸ್ಟ್ರೀಟ್ ವೆಂಡರ್ಸ್ ಜೋನ್ ಅಭಿವೃದ್ಧಿ ನಡೆಸಲಾಗುತ್ತಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರಸಭೆಯಿಂದ ನಗರದ ವಿವಿಧೆಡೆ ಅಂದಾಜು ₹ 2.53 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸತ್ಯನಾರಾಯಣ ಜ್ಯುವೆಲ್ಲರ್ಸ್ ಸಹಯೋಗದಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದ ಅಂತರಗಂಗೆ ರಸ್ತೆಗೆ ಕಮಾನು ನಿರ್ಮಾಣಕ್ಕೆ ₹ 1.50 ಕೋಟಿ ಮತ್ತು ಬಸ್ ನಿಲ್ದಾಣದ ಕಡೆಯಿಂದ ಕಾಳಮ್ಮ ಗುಡಿ ರಸ್ತೆ ಸಂಪರ್ಕಿಸುವ ರಾಣಿ ಚೆನ್ನಮ್ಮ ವೃತ್ತದ ₹ 52 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ನಗರಸಭೆಯ ಐಡಿಎಸ್ಎಂಟಿ ಯೋಜನೆಯ ಲೆಕ್ಕ ಶೀರ್ಷಿಕೆಯಡಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಟಿ.ಚನ್ನಯ್ಯ ಸಂತೆ ಮೈದಾನದಲ್ಲಿ ₹ 1.8 ಕೋಟಿ ವೆಚ್ಚದಲ್ಲಿ ಹೂವು, ಹಣ್ಣು,ತರಕಾರಿ ಮಾರುಕಟ್ಟೆ ನಿರ್ಮಾಣ, ಹಾಗೂ ನಗರಸಭೆ ನಿಧಿಯಲ್ಲಿ ವಾರ್ಡ್ ನಂಬರ್ 9ರ ಸರ್ವಜ್ಞ ಪಾರ್ಕ್ ಹಿಂಭಾಗ ಪ್ರಭಾತ್ ಟ್ಯಾಕೀಸ್ ರಸ್ತೆಯಲ್ಲಿ ಸ್ಟ್ರೀಟ್ ವೆಂಡರ್ಸ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಸಂತೆ ಮೈದಾನದಲ್ಲಿ ಈಗ ಯಾರು ವ್ಯಾಪಾರ ನಡೆಸುತ್ತಿದ್ದಾರೆಯೋ ಅವರಿಗೆ ಅವಕಾಶ ಮಾಡಿಕೊಡಲಾಗುವುದು. ಮಿಕ್ಕಿದರೆ ಬೇರೆಯವರಿಗೆ ಅವಕಾಶ ಮಾಡಿಕೊಡಲಾಗುವುದು. ಪ್ರಭಾತ್ ಟಾಕೀಸ್ ರಸ್ತೆಯಲ್ಲಿ ಫುಡ್ ಕೋರ್ಟ್ ರೀತಿಯಲ್ಲಿ ಮಳಿಗೆ ನಿರ್ಮಿಸಿ ತರಕಾರಿ, ಹಣ್ಣು ಮಾರಲು ಅವಕಾಶ ಕಲ್ಪಿಸಲಾಗುವುದು ಎಂದರು.

ಜಿಲ್ಲೆಯ ಒಬ್ಬರಿಗೆ ಸಚಿವ ಸ್ಥಾನ ಬೇಕು: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವೇಳೆ ಕೋಲಾರ ಜಿಲ್ಲೆಯ ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೊತ್ತೂರು ಮಂಜುನಾಥ್, ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಬಗ್ಗೆ ಶೀಘ್ರದಲ್ಲೇ ದಾಖಲೆ ಸಮೇತ ಮಾಧ್ಯಮಗಳಿಗೆ ಹಾಗೂ ವಿಪಕ್ಷಗಳಿಗೆ ತಿಳಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮಿ ದೇವಮ್ಮ, ಕಾಂಗ್ರೆಸ್ ಎಸ್ಟಿ ವಿಭಾಗದ ಜಿಲ್ಲಾ ಅಧ್ಯಕ್ಷ ಅಂಬರೀಷ್, ಸತ್ಯನಾರಾಯಣ ಜ್ಯುವೆಲ್ಲರ್ಸ್ ಮಾಲೀಕರು, ಮುಖಂಡರಾದ ಕಠಾರಿಪಾಳ್ಯ ಗಂಗಣ್ಣ, ಅಮರನಾಥ್, ನಗರಸಭೆ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-18-311624018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.