ಕೋಲಾರ: ಜಿಲ್ಲೆಯಲ್ಲಿ ಫೆ.28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಸರ್ಕಾರ ಹಾಗೂ ಮಂಡಳಿ ಸೂಚನೆಯಂತೆ ಯಾವುದೇ ಅಕ್ರಮಕ್ಕೆ ಆಸ್ಪದ ನೀಡದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರೀಕ್ಷೆಯ ಸುಗಮ ನಿರ್ವಹಣೆಗಾಗಿ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು, ಪರೀಕ್ಷಾ ನಿಯಂತ್ರಕರು ಹಾಗೂ ಮಾರ್ಗಾಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆ ನೀಡಲಾಗಿದೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ’ ಎಂದರು.

ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದವಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ತಡೆಯಲು ಕ್ರಮ ವಹಿಸಲಾಗಿದೆ. ಯಾವುದೇ ಪರೀಕ್ಷಾ ಅಕ್ರಮ ಹಾಗೂ ಸಮೂಹ ನಕಲಿಗೆ ಕಡಿವಾಣ ಹಾಕಲು ಸಿ.ಸಿ.ಟಿ.ವಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ಮೂಲಕ ನಿಗಾ ಇಡಲಾಗುವುದು. ಸಾಮಾಜಿಕ ಜಾಲತಾಣ ಅಥವಾ ಬೇರೆ ಯಾವುದೇ ವಿಧದಲ್ಲಿ ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆ ಸಾಗಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಿದ್ದು, ಪೊಲೀಸರ ಬೆಂಗಾವಲಿನಲ್ಲಿ ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲಿದ್ದಾರೆ. ಸುರಕ್ಷತೆ ದೃಷ್ಟಿಯಿಂದ ಈ ವಾಹನಗಳಿಗೆ ಜಿಪಿಎಸ್ ವ್ಯವಸ್ಥೆ ಇರಲಿದೆ ಎಂದು ನುಡಿದರು.

ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ಕಡ್ಡಾಯಗೊಳಿಸಲಾಗಿದೆ. ಮೊಬೈಲ್, ಸ್ಮಾರ್ಟ್ ವಾಚ್, ಐಪಾಡ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣ ಕೊಂಡೊಯ್ಯುವಂತಿಲ್ಲ. ಮುಖ್ಯ ಅಧೀಕ್ಷಕರಿಗೆ ಮಾತ್ರ ಸಂವಹನಕ್ಕಾಗಿ ಬೇಸಿಕ್ ಫೋನ್ ಬಳಸಲು ಅವಕಾಶ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೇಲ್ವಿಚಾರಣೆಗೆಂದು ಒಟ್ಟು 7 ಮಂದಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಪರೀಕ್ಷೆಯ ಅವಧಿಯಲ್ಲಿ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಹತ್ತಿರದ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದರು.

ಈ ಬಾರಿ ಪರೀಕ್ಷೆಗೆ ಒಟ್ಟು 14,567 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 6,502 ಬಾಲಕರು ಹಾಗೂ 8,065 ಬಾಲಕಿಯರು ಇದ್ದಾರೆ ಎಂದು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ತುರ್ತು ಆರೋಗ್ಯ ಸೇವೆಗಾಗಿ ಆಶಾ ಕಾರ್ಯಕರ್ತೆಯರ ನಿಯೋಜನೆ ಮಾಡಲಾಗಿದೆ. ನಿರಂತರ ವಿದ್ಯುತ್ ಸರಬರಾಜು ಮಾಡಲು ಬೆಸ್ಕಾಂಗೆ ಹಾಗೂ ಪರೀಕ್ಷಾ ಸಮಯಕ್ಕೆ ಪೂರಕವಾಗಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಕೆಎಸ್ಆರ್ಟಿಸಿಗೆ ಸೂಚಿಸಲಾಗಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಯು) ರಾಜಶೇಖರ್ ಪಟ್ಟಣಶೆಟ್ಟಿ ಇದ್ದರು.

ಪರೀಕ್ಷೆಗೆ ನೋಂದಾಯಿಸಿರುವ ಬಾಲಕರು; 6,502, ಬಾಲಕಿಯರು; 8,065 ಕಳೆದ ಬಾರಿ ಶೇ 72.45 ಫಲಿತಾಂಶ, 16ನೇ ಸ್ಥಾನ ಮೊದಲ ದಿನ ಕನ್ನಡ; ಬೆಳಿಗ್ಗೆ 10 ಗಂಟೆಯಿಂದ 1 ಗಂಟೆವರೆಗೆ ಪರೀಕ್ಷೆ

ಕೋಲಾರ ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿದವರು * ಹೊಸಬರು; 13167 * ಪುನರಾವರ್ತಿತರು; 1130 * ಖಾಸಗಿ; 270 * ಒಟ್ಟು; 14567

ಉತ್ತಮ ಫಲಿತಾಂಶದ ವಿಶ್ವಾಸ

ಈ ಬಾರಿ ಪೂರ್ವಸಿದ್ಧತೆಯ ಎರಡೂ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಶೇ 80ಕ್ಕೂ ಅಧಿಕ ಅಂಕ ಪಡೆದಿದ್ದಾರೆ. ಹೀಗಾಗಿ ಕಳೆದ ಬಾರಿಗಿಂತ ಸುಧಾರಿತ ಫಲಿತಾಂಶ ಬರಬಹುದೆಂಬ ನಿರೀಕ್ಷೆ ಹಾಗೂ ವಿಶ್ವಾಸದಲ್ಲಿ ಇದ್ದೇವೆ. ಕಳೆದ ಬಾರಿ ಜಿಲ್ಲೆಯು ಶೇ 72.45 ಫಲಿತಾಂಶದೊಂದಿಗೆ 16ನೇ ಸ್ಥಾನ ಪಡೆದಿತ್ತು. ವಿದ್ಯಾರ್ಥಿಗಳು ನಿರ್ಭಿತಿಯಿಂದ ಪರೀಕ್ಷೆ ಬರೆಯಬೇಕು. ವಿದ್ಯಾರ್ಥಿಗಳಾಗಲಿ ಪೋಷಕರಾಗಲಿ ಗೊಂದಲ ಆತಂಕಕ್ಕೆ ಒಳಗಾಗಬಾರದು. ಯಾವುದಾದರೂ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಆತಂಕ ಅಥವಾ ಸಮಸ್ಯೆಗಳಿದ್ದಲ್ಲಿ ನಿಯಂತ್ರಣ ಕೊಠಡಿ ಸಂಖ್ಯೆ 1098ಕ್ಕೆ ಕರೆ ಮಾಡಿ ಮಾತನಾಡಬಹುದು ಎಂ.ಆರ್.ರವಿ ಜಿಲ್ಲಾಧಿಕಾರಿ

ವೆಬ್ ಕಾಸ್ಟಿಂಗ್: ಜಿ.ಪಂನಲ್ಲಿ ನಿಗಾ ಪರೀಕ್ಷಾ ಅಕ್ರಮ ಸಮೂಹ ನಕಲು ತಡೆಯಲು ಪರೀಕ್ಷೆ ನಡೆಯಲಿರುವ ಎಲ್ಲಾ 527 ಕೊಠಡಿಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲದೇ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ನೇರ ದೃಶ್ಯಗಳ ಮೇಲೆ ಜಿಲ್ಲಾ ಪಂಚಾಯಿತಿಯಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಯಲ್ಲಿ ಆರು ಸದಸ್ಯರ ತಂಡ ನಿಗಾ ಇಡಲಿದೆ. ಈ ದೃಷ್ಟಿಯಿಂದ ಸಿಬ್ಬಂದಿಗೆ ತರಬೇತಿ ನೀಡಿ ನಿಯೋಜಿಸಲಾಗಿದೆ ಎಂದು ಎಂ.ಆರ್.ರವಿ ತಿಳಿಸಿದರು. ವೆಬ್ ಕಾಸ್ಟಿಂಗ್ ಸಮಯದಲ್ಲಿ ಯಾವುದೇ ಅಡಚಣೆಯಾಗದಂತೆ ಇಂಟರ್ನೆಟ್ ವೇಗವನ್ನು 180 ಎಂಬಿಯಿಂದ 300 ಎಂಬಿಗೆ ಹೆಚ್ಚಿಸಲಾಗಿದೆ ಎಂದರು.

28 ಪರೀಕ್ಷಾ ಕೇಂದ್ರ 9 ಮಾರ್ಗ

ಈ ಬಾರಿ ಜಿಲ್ಲೆಯಲ್ಲಿ 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕೋಲಾರ–10 ಮುಳಬಾಗಿಲು–5 ಶ್ರೀನಿವಾಸಪುರ–3 ಮಾಲೂರು–4 ಕೆಜಿಎಫ್–3 ಬಂಗಾರಪೇಟೆ–3 ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ವಿತರಿಸಲು 9 ಮಾರ್ಗಗಳನ್ನು ರಚಿಸಲಾಗಿದೆ. ಕೋಲಾರಕ್ಕೆ 3 ಮುಳಬಾಗಿಲಿಗೆ 2 ಹಾಗೂ ಇನ್ನುಳಿದ ತಾಲ್ಲೂಕುಗಳಿಗೆ ತಲಾ ಒಂದು ಮಾರ್ಗ ಇರಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.