ಶನಿವಾರ, ಸೆಪ್ಟೆಂಬರ್ 24, 2022
21 °C

ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷರ ಕಾರು ಡಿಕ್ಕಿ; ದ್ವಿಚಕ್ರ ವಾಹನ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ (ಕೋಲಾರ ಜಿಲ್ಲೆ): ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಅವರಿದ್ದ ಕಾರು ಶ್ರೀನಿವಾಸಪುರ-ಚಿಂತಾಮಣಿ ಮುಖ್ಯರಸ್ತೆಯ ಪಾತಪಲ್ಲಿ ಗ್ರಾಮದ ಬಳಿ ಬುಧವಾರ ಡಿಕ್ಕಿಯಾಗಿ,  ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತರಾದರು.

ಪಾತಪಲ್ಲಿ ಗ್ರಾಮದ ರಾಜಣ್ಣ (50) ಮೃತ ವ್ಯಕ್ತಿ.

'ಅಪಘಾತಕ್ಕೆ ಬಿಜೆಪಿ ಜಿಲ್ಲಾ ಅಧ್ಯಕ್ಷರಿದ್ದ ಕಾರು ಅತಿವೇಗವಾಗಿ ತೆರಳುತ್ತಿದ್ದದ್ದೇ ಕಾರಣ' ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿದ್ದು,‌ ಮೃತದೇಹವನ್ನು ಶ್ರೀನಿವಾಸಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

 ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ‌ ಚರಣ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು