ಕೋಲಾರ: ಕಾನೂನು ಬಾಹಿರವಾಗಿ ಆಯ್ಕೆ ಮಾಡಿರುವ ಜಿಲ್ಲಾ ಜಾಗೃತಿ ಸಮಿತಿಯನ್ನು ಕೂಡಲೇ ರದ್ದು ಮಾಡಿ ಹೊಸದಾಗಿ ರಚಿಸಬೇಕು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ ಅವರ ನಿಯೋಜನೆಯನ್ನು ರದ್ದು ಮಾಡಬೇಕು ಎಂದು ದಲಿತ ಸಂಘಟನೆಗಳ ಸಂಯುಕ್ತ ರಂಗದ ಮುಖಂಡರು ಮಂಗಳವಾರ ಒತ್ತಾಯಿಸಿದರು.

ಸಂಯುಕ್ತ ರಂಗ ಅಧ್ಯಕ್ಷ ಡಿಪಿಎಸ್ ಮನಿರಾಜು ಮಾತನಾಡಿ, ‘ಜಿಲ್ಲಾ ಜಾಗೃತಿ ಸಮಿತಿ ಆಯ್ಕೆ ಮಾಡಲು ಹಲವಾರು ನಿಬಂಧನೆಗಳು, ಷರತ್ತುಗಳು ಇವೆ. ಅರ್ಜಿಗಳನ್ನು ಹಾಕಲು ಎಲ್ಲಾ ದಲಿತಪರ ಸಂಘ ಸಂಸ್ಥೆಗಳು ಮತ್ತು ಸಮುದಾಯದ ಸೇವಕರಿಗೆ ಅವಕಾಶ ನೀಡಬೇಕು, ಅರ್ಜಿ ಹಾಕಲು ಮೊದಲೇ ಪ್ರಚಾರಗೊಳಿಸಬೇಕು. ಸಮುದಾಯದ ಬಡವರ ಪರವಾಗಿ ಯಾರು ಸೇವೆ ಸಲ್ಲಿಸಿರುತ್ತಾರೆ ಅವರಿಗೆ ಮೊದಲ ಆದ್ಯತೆ ನೀಡಬೇಕು’ ಎಂದು ಮನವರಿಕೆ ಮಾಡಿಕೊಟ್ಟರು.

ದಮನಿತರ ಸೇವಾ ಸಮಿತಿ ರಾಜ್ಯ ಅಧ್ಯಕ್ಷ ಮೇಡಿಹಾಳ ಮುನಿಅಂಜಿನಪ್ಪ ಮಾತನಾಡಿ, ಜಾಗೃತಿ ಸಮಿತಿಯನ್ನು ಈ ಕೂಡಲೇ ವಜಾಗೊಳಿಸಿ ನಿಯಮಗಳ ಪ್ರಕಾರ ಹೊಸದಾಗಿ ನೇಮಕ ಮಾಡಬೇಕು. ಜಂಟಿ ನಿರ್ದೇಶಕ ಶ್ರೀನಿವಾಸ್ ಅವರ ನಿಯೋಜನೆ ರದ್ದುಪಡಿಸಿ ಮಾತೃ ಇಲಾಖೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.

ದಲಿತ ಸಂಘಟನೆಗಳ ಮುಖಂಡರಾದ ದಲಿತ್ ನಾರಾಯಣಸ್ವಾಮಿ, ಮೋಚಿಪಾಳ್ಳ ನಾಗೇಶ್, ಅಂಬೇಡ್ಕರ್ ನಗರ ಮಂಜು, ಮತ್ತಿಕುಂಟೆ ಕೃಷ್ಣಪ್ಪ, ಹರಳಕುಂಟೆ ರಾಜು, ಮಹಿಳಾ ಘಟಕದ ಗಿರಿಜಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-18-245563993

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.