ಕೋಲಾರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಜನರು ಬಸವಳಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಪ್ರತ್ಯೇಕ ‘ಹೀಟ್ ಸ್ಟ್ರೋಕ್ ವಾರ್ಡ್’ ಆರಂಭಿಸಿದೆ.

ನಗರದ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯೊಂದನ್ನು ಈ ಉದ್ದೇಶಕ್ಕೆ ಸಿದ್ಧಪಡಿಸಿದ್ದು, 10 ಬೆಡ್ಗಳನ್ನು ವ್ಯವಸ್ಥೆ ಮಾಡಲಾಗಿದೆ. ಸಿಬ್ಬಂದಿ, ವೈದ್ಯರನ್ನೂ ನಿಗದಿಪಡಿಸಲಾಗಿದೆ.

ಸರ್ಕಾರದ ನಿರ್ದೇಶನದಂತೆ ಪ್ರತಿ ಜಿಲ್ಲೆಯಲ್ಲಿ ‘ಹೀಟ್ ಸ್ಟ್ರೋಕ್ ವಾರ್ಡ್’ ಆರಂಭಿಸುವಂತೆ ಸರ್ಕಾರದ ಸೂಚನೆ ಇದೆ. ಬಿಸಿಲಿನಿಂದ ಬ್ರೈನ್ ಸ್ಟ್ರೋಕ್ ಅಥವಾ ಸನ್ ಸ್ಟ್ರೋಕ್ ಆದಂಥ ಸಂದರ್ಭದಲ್ಲಿ ಪ್ರತ್ಯೇಕ ಚಿಕಿತ್ಸೆಗೆ ಬೇಕಾದಂತಹ ಗ್ಲೋಕೋಸ್, ಸೀರಂಜ್, ವಿವಿಧ ಔಷಧಿಗಳ ವ್ಯವಸ್ಥೆಯನ್ನು ಈ ವಾರ್ಡ್ನಲ್ಲಿ ಮಾಡಲಾಗಿದೆ. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್ ಪರಿಶೀಲನೆ ನಡೆಸಿದರು.

ಬಿಸಿಲಿನ ತಾಪಮಾನಕ್ಕೆ ಜನ ಹೈರಾಣಾಗುತ್ತಿದ್ದು, ಮನೆಗಳಿಂದ ಹೊರಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ತಾಪಮಾನ ಪ್ರಮಾಣ 38 ಡಿಗ್ರಿ ಸೆಲ್ಸಿಯವರೆಗೆ ದಾಖಲಾಗುತ್ತಿದೆ.

ನಗರದ ಜ್ಯೂಸ್ ಅಂಗಡಿಗಳ ಮುಂದೆ ಜನರು ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ರಸ್ತೆ ಬದಿಯೂ ಜ್ಯೂಸ್ ಅಂಗಡಿಗಳು ಹೊಸದಾಗಿ ತೆರೆದುಕೊಂಡಿವೆ. ತಾಟಿನಿಂಗು ಹಣ್ಣಿನ ವ್ಯಾಪಾರಿಗಳ ಸಂಖ್ಯೆಯೂ ಹೆಚ್ಚಿದ್ದು, ಭರ್ಜರಿ ಮಾರಾಟ ನಡೆಯುತ್ತಿದೆ. ಕಲ್ಲಂಗಡಿ ಸೇರಿದಂತೆ ವಿವಿಧ ಹಣ್ಣುಗಳ ಜ್ಯೂಸ್, ಐಸ್ ಕ್ರೀಂ, ಐಸ್ ಕ್ಯಾಂಡಿ, ಕಬ್ಬಿನ ಹಾಲು, ಸೋಡಾಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ.

ಫ್ಯಾನ್, ಹವಾನಿಯಂತ್ರಿತ ಯಂತ್ರ ಅಥವಾ ಕೂಲರ್ ಇಲ್ಲದಿದ್ದರೆ ಮನೆಯೊಳಗೆ ಕೂರಲು, ಮಲಗಲು ಸಾಧ್ಯವಾಗದ ಪರಿಸ್ಥಿತಿ ನೆಲೆಸಿದೆ. ಶಿಶುಗಳು, ಮಕ್ಕಳನ್ನು ಸಮಾಧಾನಪಡಿಸಲು ತಾಯಂದಿರಿಗೆ ಸವಾಲಾಗಿ ಪರಿಣಮಿಸಿದೆ.

ನಗರದಲ್ಲಿ ವಿವಿಧ ಕೆಲಸಕ್ಕೆ ಬರುವವರು, ವ್ಯಾಪಾರಿಗಳು ತಲೆಗೆ ಮುಸುಕು ಹಾಕಿಕೊಂಡು ಅಥವಾ ಛತ್ರಿ ಹಿಡಿದುಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ, ಪಕ್ಷಿಗಳು, ಬಿಡಾಡಿ ದನಕರುಗಳು, ಬೀದಿನಾಯಿಗಳೂ ಬಿಸಿಲಿನಿಂದ ಬಳಲುತ್ತಿವೆ. ಗಿಡ ಮರಗಳು ಒಣಗುತ್ತಿವೆ.

ತಾಪಮಾನ ಮತ್ತಷ್ಟು ಏರಿಕೆಯಾಗುವ ಸಂಭವವಿರುವುದರಿಂದ ಜನರು ಆದಷ್ಟು ಓಡಾಟ ಕಡಿಮೆ ಮಾಡಬೇಕು. ಮಕ್ಕಳು, ವಯೋವೃದ್ಧರು, ಗರ್ಭಿಣಿಯರು ಸಂಜೆಯ ವೇಳೆಗೆ ಹೊರಗಡೆ ಬರುವುದು ಒಳ್ಳೆಯದು. ಎಳನೀರು, ಹಣ್ಣಿನ ರಸ ಕುಡಿಯುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-18-2062192857

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.