ಕೋಲಾರ: ‘ಜಿಲ್ಲೆಯಲ್ಲಿ ಈಗಾಗಲೇ ಕೆ.ಸಿ ವ್ಯಾಲಿ ನೀರಿನ ಮೂಲಕ ಅಂತರ್ಜಲ ವೃದ್ಧಿಯಾಗುತ್ತಿದ್ದು, ಜೊತೆಗೆ ಮರುಪೂರಣದ ಅಗತ್ಯವೂ ಇದೆ. ತಂತ್ರಜ್ಞಾನ ಬಳಸಿಕೊಂಡು ಜಿಲ್ಲೆಯ ಎಲ್ಲಾ ಕೆರೆಗಳಿಗೂ ನೀರು ಹರಿಸುವ ಯೋಜನೆ ಇದೆ’ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.

ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಜೀವಜಲ ಯೋಜನೆಯ ಅನುಷ್ಠಾನ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

‘ಕೆರೆಗಳನ್ನು ಮೂರು ಹಂತಗಳಲ್ಲಿ ಅಭಿವೃದ್ಧಿಪಡಿಸಲು ಚಿಂತಿಸಲಾಗಿದೆ. ಎಲ್ಲಾ ಕೆರೆಗಳನ್ನು ಸರ್ವೇ ಮಾಡುತ್ತಿದ್ದು, ಶೇ 50ರಷ್ಟು ಪೂರ್ಣಗೊಂಡಿದೆ, ಒತ್ತುವರಿ ಆಗಿದೆಯೇ ಎಂಬುದರ ಕುರಿತು ಸರ್ವೇ ಮಾಡಲಾಗುತ್ತಿದೆ. ಒತ್ತುವರಿ ಆಗಿದ್ದರೆ ತೆರವುಗೊಳಿಸಿ ಬೇಲಿ ಹಾಕಿ ನಂತರ ಸಂಬಂಧಪಟ್ಟ ಇಲಾಖೆಗಳಿಗೆ ವಹಿಸಿಕೊಡಲಾಗುತ್ತಿದೆ’ ಎಂದರು.

‘ಕೆರೆಗಳಲ್ಲಿನ ಒತ್ತುವರಿ ತೆರವುಗೊಳಿಸಿದ ನಂತರ ನೀರನ್ನು ಸಂಗ್ರಹಿಸುವುದು ಮುಖ್ಯವಾಗಿರುತ್ತದೆ. ಆದ್ದರಿಂದ ಕೆ.ಸಿ ವ್ಯಾಲಿ ನೀರು ಮತ್ತು ಮಳೆ ನೀರಿನ ಮೂಲಕ ಕೆರೆಗಳನ್ನು ತುಂಬಿಸಿ ನಂತ ಕಂಪನಿಗಳಿಗೆ ದತ್ತು ನೀಡಲಾಗುವುದು. ಕೆಲ ಕೆರೆಗಳಲ್ಲಿ ಜಲಸ ಸಾಹಸ ಕ್ರೀಡಾ ಚಟುವಟಿಕೆಗಳನ್ನು ಪ್ರಾರಂಭ ಮಾಡಲಾಗುತ್ತದೆ’ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೆಲವು ಕೆರೆಗಳಲ್ಲಿ ನೀರು ತುಂಬಿಸಲು ಮೂಲಗಳನ್ನು ಹುಡುಕಿಕೊಂಡು ನಂತರ ಕೆರೆಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆ ಮಾಡಲಾಗುವುದು. ಮತ್ತಷ್ಟು ಕೆರೆಗಳಲ್ಲಿ ಮತ್ಸ್ಯಗಾರಿಕೆ ಮಾಡಬೇಕು ಎಂದು ಸೂಚಿಸಿದರು.

ನಗರೀಕರಣದಿಂದ ಕೆರೆಗಳ ಒತ್ತುವರಿ ಹೆಚ್ಚಾಗಿದೆ. ಎಐ ತಂತ್ರಜ್ಞಾನ ಬಳಸಿಕೊಂಡು ಕೆರೆಗಳ ನಡುವಿನ ದಾರಿಯನ್ನು ಸುಗಮಗೊಳಿಸಿಕೊಳ್ಳಬೇಕು ಸ್ಥಳೀಯ ಕೆರೆ ಪ್ರಾಂಗಣ ಪರಿಶೀಲಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಪಿಎಸಿ ನಿರ್ದೇಶಕರಾದ ಎನ್.ಟಿ.ಅಬ್ರು, ಪ್ರೊ.ಇನಾಯತುಲ್ಲ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.