ಕೋಲಾರ: ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅ.1 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಈ ಪ್ರಕ್ರಿಯೆಯನ್ನು 3ನೇ ಹಂತದಲ್ಲಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಆರ್.ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ 2026ರ ಮೇ 25ರ ಅಂಕಿಅಂಶಗಳ ಪ್ರಕಾರ ಒಟ್ಟು 12,94,724 ಮತದಾರರಿದ್ದು, ಇವರೆಲ್ಲರನ್ನೂ ಈ ವಿಶೇಷ ಸಮಗ್ರ ಪರಿಷ್ಕರಣೆ ಒಳಗೊಂಡಿರುತ್ತದೆ. ಜಿಲ್ಲೆಯಾದ್ಯಂತ ಈ ಬೃಹತ್ ಕಾರ್ಯವನ್ನು ಯಶಸ್ವಿಯಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಒಟ್ಟು 1,538 ಮತಗಟ್ಟೆ ಹಂತದ ಅಧಿಕಾರಿಗಳನ್ನು (ಬಿಎಲ್ಒ) ನಿಯೋಜಿಸಲಾಗಿದೆ. ಇದರ ಜೊತೆಗೆ, ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ಒಟ್ಟು 1,650 ಬೂತ್ ಮಟ್ಟದ ಏಜೆಂಟರನ್ನು (ಬಿಎಲ್ಎ) ನೇಮಕ ಮಾಡಲಾಗಿದೆ ಎಂದಿದ್ದಾರೆ.

ಮತಗಟ್ಟೆ ಹಂತದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ ಹಾಗೂ ಸಂಗ್ರಹಿಸುವ ಕಾರ್ಯವನ್ನು ಕೈಗೊಳ್ಳಲಿದ್ದು, ಈ ಪ್ರಕ್ರಿಯೆಯು ವಿವಿಧ ಹಂತಗಳಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ಸಿದ್ಧತೆ ಮತ್ತು ತರಬೇತಿ: ಜೂನ್ 20ರಿಂದ 29ರ ವರೆಗೆ ಬಿಎಲ್ಒಗಳಿಗೆ ತರಬೇತಿ ಕಾರ್ಯಕ್ರಮಗಳು ನಡೆಯಲಿವೆ. ಜೂನ್ 30ರಿಂದ ಜುಲೈ 29 ರವರೆಗೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಮತಗಟ್ಟೆಗಳ ರಾಷನಲೈಸೇಷನ್ ಪ್ರಕ್ರಿಯೆಯು ಜುಲೈ 29ರಂದು ನಡೆಯಲಿದೆ. ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಂದಿನಿಂದ ಸೆ.4 ರವರೆಗೆ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ವೀಕೃತವಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಅ.3 ರೊಳಗೆ ವಿಲೇವಾರಿ ಮಾಡಲಾಗುವುದು. ಸಂಪೂರ್ಣ ಪ್ರಕ್ರಿಯೆ ಮುಗಿದ ಬಳಿಕ, ಅ.7 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿಯೊಂದು ಮತಗಟ್ಟೆಗೂ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡುವಂತೆ ಕೋರಲಾಗಿದೆ. ಇವರು ಪರಿಷ್ಕರಣಾ ಪ್ರಕ್ರಿಯೆಯ ವೇಳೆ ಮತಗಟ್ಟೆ ವ್ಯಾಪ್ತಿಯಲ್ಲಿ ಹಾಜರಿದ್ದು, ಯಾವುದೇ ಲೋಪದೋಷಗಳಾಗದಂತೆ ಅಧಿಕಾರಿಗಳೊಂದಿಗೆ ಸಹಕರಿಸಬೇಕಾಗಿರುತ್ತದೆ ಎಂದಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಹಾಗೂ ಭಾರತ ಚುನಾವಣಾ ಆಯೋಗದ ಅಧಿಕೃತ ಜಾಲತಾಣಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-18-1628735345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.