ಕೋಲಾರ: ತಮ್ಮ ಜಮೀನಿನಲ್ಲಿ ಬೆಳೆದಿದ್ದ ಗಿಡಗಳನ್ನು ರೈತರು ಸ್ವಚ್ಛ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಅತಿಕ್ರಮವಾಗಿ ಪ್ರವೇಶ ಮಾಡಿ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ, ರೈತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ರೈತ ಮುಖಂಡ ಆರ್.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಡಿ.26 ರಂದು ಅರಣ್ಯ ಇಲಾಖೆ ಅಧಿಕಾರಿಗಳ ಹರಟಿ ಗ್ರಾಮದ ರೈತರ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ, ರೈತರನ್ನು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಮಾಧಾನಪಡಿಸಿದ್ದರು. ಅವರು ಹೋದ ನಂತರ ಮತ್ತೆ ರೈತರ ಜಮೀನುಗಳಿಗೆ ಬಂದ ಅಧಿಕಾರಿಗಳಿಗೆ ಅಗತ್ಯ ದಾಖಲೆ ತೋರಿಸಲಾಗಿದೆ. ಆದಾಗ್ಯೂ ಹರಟಿ ಗ್ರಾಮದ ಎಂಟು ರೈತರ ಮೇಲೆ ಪ್ರಕರಣ ದಾಖಲಿಸಿದ್ದಾರೆ’ ಎಂದು ದೂರಿದ್ದಾರೆ.

ಅರಣ್ಯ ಇಲಾಖೆಯ ದೌರ್ಜನ್ಯವನ್ನು ಖಂಡಿಸಿ ಅಧಿಕಾರಿಗಳ ಮೇಲೆ ದೂರು ನೀಡಲಾಗಿದೆ. ಅಧಿಕಾರಿಗಳ ಬಳಿ ಸರಿಯಾದ ದಾಖಲೆಗಳು ಇಲ್ಲದಿದ್ದರೂ ರೈತರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರೈತರ ಬಳಿ ದಾಖಲೆಗಳು ಇದ್ದರೂ ಅಧಿಕಾರಿಗಳ ವಿರುದ್ಧ ಯಾವುದೇ ಎಫ್ಐಆರ್ ದಾಖಲು ಮಾಡಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಕೆಪಿಆರ್ಆಸ್ ಮುಖಂಡ ವೆಂಕಟೇಶ್, ರೈತರಾದ ಹರಟಿ ಪ್ರಕಾಶ್, ವೆಂಕಟೇಶ್, ವೆಂಕಟರಮಣಪ್ಪ, ಮಂಜುನಾಥ್, ಶ್ರೀನಿವಾಸ್, ಆನಂದ್, ವೆಂಕಟೇಶ್ ಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.