ಬಂಗಾರಪೇಟೆ (ಕೋಲಾರ): ಬಾಲಕಿ ಮೇಲೆ ಅತ್ಯಾಚಾರವೆಸಗಿ, ಗರ್ಭಿಣಿಯಾಗಿಸಿದ ಆರೋಪದ ಮೇಲೆ ರೈತಸಂಘದ ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷನನ್ನು ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಟಿ.ಎ.ರಾಮೇಗೌಡ (52) ಬಂಧಿತ ಆರೋಪಿ. ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾಲ್ಕು ತಿಂಗಳ ಗರ್ಭಿಣಿಯಾಗಿರುವ 9ನೇ ತರಗತಿಯ ಸಂತ್ರಸ್ತ ಬಾಲಕಿಯ ಕುಟುಂಬ ನೀಡಿದ ದೂರಿನ ಮೇರೆಗೆ ಪೋಕ್ಸೊ ಕಾಯ್ದೆ ಅಡಿ ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗೆ ಇಬ್ಬರು ಪತ್ನಿಯರಿದ್ದು, ಇಬ್ಬರು ಮಕ್ಕಳಿದ್ದಾರೆ. ತಾಲ್ಲೂಕಿನ ತ್ಯಾರನಹಳ್ಳಿಯ ನಿವಾಸಿಯಾಗಿರುವ ಆರೋಪಿ ಸದ್ಯ ಬಂಗಾರಪೇಟೆಯ ವಿವೇಕಾನಂದ ನಗರದಲ್ಲಿ ನೆಲಸಿದ್ದಾರೆ.

ಪ್ರಕರಣವೊಂದರಲ್ಲಿ ಬುದ್ಧಿವಾದ ಹೇಳಲು ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿದ್ದ ಆರೋಪಿ ಕೆಲ ದಿನ ಇರಿಸಿಕೊಂಡಿದ್ದ. ಆ ಅವಧಿಯಲ್ಲಿ ಬಾಲಕಿ ಗರ್ಭಿಣಿ ಆಗಿದ್ದಾಳೆ ಎಂದು ದೂರು ಆಧರಿಸಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.