ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಧ್ರಾ ರೀತಿ ಗಲಭೆ ಬಗ್ಗೆ ಗೃಹ ಇಲಾಖೆಗೆ ಮಾಹಿತಿ ಇಲ್ಲ: ಪರಮೇಶ್ವರ

Published 3 ಜನವರಿ 2024, 23:58 IST
Last Updated 3 ಜನವರಿ 2024, 23:58 IST
ಅಕ್ಷರ ಗಾತ್ರ

ಕೋಲಾರ: ‘ಗೋಧ್ರಾ ರೀತಿಯ ಮತ್ತೊಂದು ದುರಂತ ಸಂಭವಿಸಲಿದೆ ಎಂಬ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ಹಂಚಿಕೊಂಡಿರುವ ವಿಷಯದ ಬಗ್ಗೆ ನನಗೆ ಮಾಹಿತಿಯಿಲ್ಲ. ಇಲಾಖೆಯ ಗಮನಕ್ಕೂ ಆ ವಿಚಾರ ಬಂದಿಲ್ಲ. ಹರಿಪ್ರಸಾದ್‌ ಅವರಿಗೆ ಗೊತ್ತಿರಬಹುದೇನೋ?’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಅಯೋಧ್ಯೆ ವಿಚಾರವಾಗಿ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಗೋಧ್ರಾ ರೀತಿಯ ಮತ್ತೊಂದು ದುರಂತ ಸಂಭವಿಸಲಿದೆ ಎಂಬ ಹರಿಪ್ರಸಾದ್‌ ಹೇಳಿಕೆ ಕುರಿತು ನಗರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

‘ಹರಿಪ್ರಸಾದ್‌ ಯಾವ ಮಾಹಿತಿ ಆಧರಿಸಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಇದು ವೈಯಕ್ತಿಕ ಹೇಳಿಕೆ ಎಂದು ಅವರೇ ಹೇಳಿಕೊಂಡಿರುವಾಗ ಮತ್ತೆ ಇನ್ನೇನಿದೆ? ಸರ್ಕಾರಕ್ಕೆ ಯಾರೇ ಆಗಲಿ ಒಳ್ಳೆಯ ಸಲಹೆ ನೀಡಿದರೆ ಪಡೆದು ಸ್ವೀಕಾರ ಮಾಡಿ ಅಗತ್ಯ ಕ್ರಮಕೈಗೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT