ಕೋಲಾರ: ನಗರದ ಹೊರವಲಯದ ಕಸಬಾ ಹೋಬಳಿಯ ಗಾಜಲದಿನ್ನೆ ಗ್ರಾಮದಲ್ಲಿ ಶ್ರೀಸತ್ಯಮ್ಮದೇವಿ ಮತ್ತು ಶ್ರೀಕಾಟೇರಮ್ಮ ದೇವಿಯ ಬಿಂಬ ಪ್ರತಿಷ್ಠಾಪನೆ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವು ಈಚೆಗೆ ವಿಜೃಂಭಣೆಯಿಂದ ನಡೆಯಿತು.

ಮಹೋತ್ಸವದ ಅಂಗವಾಗಿ ಎರಡು ದಿನ ದೇವಾಲಯಕ್ಕೆ ದೀಪಾಲಂಕಾರ ಮಾಡಲಾಗಿತ್ತು. ದೇವರನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಪ್ರತಿಷ್ಠಾಪನೆ ಅಂಗವಾಗಿ ಹೋಮ, ಹವನ, ವಿಶೇಷ ಪೂಜಾ ಕೈಂಕರ್ಯ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ಶಾಸ್ತ್ರೋಕ್ತವಾಗಿ ನೆರವೇರಿದವು.

ಈ ವೇಳೆ ನಡೆದ ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.

ಗಾಜಲದಿನ್ನೆ ಸೇರಿದಂತೆ ವಿವಿಧೆಡೆಯಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು. ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್, ವೈ ಶಿವಕುಮಾರ್, ಸೀಸಂದ್ರ ಗೋಪಾಲಗೌಡ, ಉರಟ ಅಗ್ರಹಾರ ಚೌಡರೆಡ್ಡಿ, ಮೈಲಾಂಡಹಳ್ಳಿ ಮುರಳಿ, ಸಿಎಂಆರ್ ಶ್ರೀನಾಥ್, ಅಶೋಕ್, ಗಾಜಲು ರಮೇಶ್, ಗುಲ್ಲಪ್ಪ, ನಾರಾಯಣಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-18-1054247284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.